ಶಿರಸಿ | ನಿಲೇಕಣಿ ಮೀನು ಮಾರುಕಟ್ಟೆ ಬಾಡಿಗೆ ಬಾಕಿ: ಪಾವತಿಸದಿದ್ದರೆ ಬೀಗ‌ ಜಡಿಯುವ ಎಚ್ಚರಿಕೆ ನೀಡಿದ ನಗರಸಭೆ

Date:

ಶಿರಸಿ ನಗರದ ನಿಲೇಕಣಿ ಮೀನು ಮಾರುಕಟ್ಟೆಯ ವ್ಯಾಪಾರಿಗಳು 13 ತಿಂಗಳಿನಿಂದ ಬಾಡಿಗೆ ಪಾವತಿಸಿಲ್ಲ. ಅಂದಾಜು 15.98 ಲಕ್ಷ ಬಾಕಿ ಉಳಿದಿದೆ. ಈಗಾಗಲೇ ನೋಟಿಸ್ ನೀಡಲಾಗಿದ್ದು, ವಾರದ ಒಳಗೆ ಹಣವನ್ನು ಸಲ್ಲಿಸದಿದ್ದರೆ ಮಾರುಕಟ್ಟೆ ಸ್ಥಗಿತಗೊಳಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಿಲೇಕಣಿಯ ಮೀನು ಮಾರುಕಟ್ಟೆಗೆ ನಗರಸಭೆಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದೇವೆ. ಆದರೂ ಸಾರ್ವಜನಿಕರು ಹಾಗೂ ಮೀನು ಮಾರಾಟ ಮಹಿಳೆಯರು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಬೀದಿ ಬದಿಯಲ್ಲಿ ಮೀನು ಮಾರಾಟ ತಪ್ಪಿಸಲು ಹಿಂದಿನ ಶಾಸಕರು ಹಾಗೂ ನಗರಸಭೆಯ ಹಿಂದಿನ ಆಡಳಿತ ಮಂಡಳಿ ನಿಲೇಕಣಿಯಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಸೌಲಭ್ಯ ಕಲ್ಪಿಸಿದ್ದರು ಎಂದು ತಿಳಿಸಿದ್ದಾರೆ.

ಹಿಂದಿನ ಸಾಲಿನ 2 ತಿಂಗಳು ಹಾಗೂ ಈ ಸಾಲಿನ 11 ತಿಂಗಳ ಬಾಡಿಗೆ ಬಾಕಿ ಉಳಿದಿದೆ. ಬಾಡಿಗೆ ಸಂಗ್ರಹಣೆಗೆ ಈಗಾಗಲೇ ಒಂದು ನೋಟಿಸ್ ನೀಡಿದ್ದೇವೆ. ಶೀಘ್ರದಲ್ಲೇ 2ನೇ ನೋಟಿಸ್ ನೀಡಲಾಗುತ್ತದೆ. ಬಾಡಿಗೆ ಪಾವತಿಸದಿದ್ದರೆ ಮಾರುಕಟ್ಟೆಯ ಶಟರ್ ಎಳೆಯಲಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಬಿಡಿಬೈಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಿಗೆ ಪೊಲೀಸ್ ಇಲಾಖೆಯಿಂದ ‘ಗಾರ್ಡ್ ಆಫ್ ಹಾನರ್’ ನೀಡುವ ಪದ್ಧತಿ ಇದೆ. ಆದರೆ ಈ ವರ್ಷ ಅದು ನಡೆಯಲಿಲ್ಲ. ಯಾಕೆ ಎಂಬುದು ಸ್ಪಷ್ಟವಾಗಬೇಕು. ಇಲ್ಲಿ ಹೆಸರು ಮುಖ್ಯವಲ್ಲ; ನಗರಸಭೆ ಅಧ್ಯಕ್ಷೆಯ ಸ್ಥಾನ ಮುಖ್ಯ. ಅಧ್ಯಕ್ಷೆ ಸ್ಥಾನಕ್ಕೆ ಅಗೌರವ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ, ಶಾಸಕ, ಜಿಲ್ಲಾಧಿಕಾರಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆಯುತ್ತಿದ್ದೇನೆ ಎಂದು ಶರ್ಮಿಳಾ ಮಾದನಗೇರಿ ತಿಳಿಸಿದರು.

ಇದನ್ನು ಓದಿದ್ದೀರಾ? ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಸುದ್ದಿಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸದಸ್ಯರು ಆನಂದ ಸಾಲೇರ, ಕುಮಾರ ಬೋರ್ಕರ, ಗೀತಾ ಶೆಟ್ಟಿ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...