ಶಿರಸಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ದ್ವನಿ) ಚಂದ್ರಕಾಂತ ಎಸ್. ಕಾದ್ರೋಳ್ಳಿ ಬಣದ ಉತ್ತರ ಕನ್ನಡ ಜಿಲ್ಲಾ ಸಮಿತಿ ಸಭೆಯು ಶಿರಸಿ ನಗರದಲ್ಲಿ ಯಶಸ್ವಿಯಾಗಿ ನೆರವೇರಿತು.
ರಾಜ್ಯಾದ್ಯಂತ ಗಮನ ಸೆಳೆಯುತ್ತಿರುವ ‘ನಮ್ಮ ನಡೆ ಮಾದಿಗರ ಕೇರಿಯ ಕಡೆಗೆ’ ಜನಾಂದೋಲನ ಸಮಾವೇಶದ ಸಿದ್ಧತೆಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಚಂದ್ರಕಾಂತ ಎಸ್. ಕಾದ್ರೋಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು ಹಾಗೂ ಮಹಿಳಾ ಘಟಕದ ತಾಲ್ಲೂಕ ಅಧ್ಯಕ್ಷರು ಸೇರಿದಂತೆ ಇತರ ಮುಖಂಡರು ಹಾಜರಿದ್ದರು.
ಪ್ರಮುಖ ಚರ್ಚೆಗಳು ಮತ್ತು ನಿರ್ಣಯಗಳು: ಡಿಸೆಂಬರ್ 24, 2025 ರಂದು ಜಿಲ್ಲೆಗೆ ಆಗಮಿಸಲಿರುವ ರಾಜ್ಯಾಧ್ಯಕ್ಷರನ್ನು ಹಳ್ಳಿ-ಹಳ್ಳಿಗಳಿಗೆ ಹಾಗೂ ಮಾದಿಗರ ಕೇರಿಗಳಿಗೆ ಕರೆದುಕೊಂಡು ಹೋಗುವ ಕುರಿತು ಮತ್ತು ಈ ಪ್ರವಾಸಕ್ಕೆ ಬೇಕಾದ ಪೂರ್ವ ತಯಾರಿಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ದಿನಾಂಕ 23/12/2025 ರಂದು ಬೆಳಗಾವಿ ನಗರದಲ್ಲಿ ನಡೆಯಲಿರುವ ಮಹತ್ವದ ‘ನಮ್ಮ ನಡೆ ಮಾದಿಗರ ಕೇರಿಯ ಕಡೆಗೆ’ ಜನಾಂದೋಲನ ಸಮಾವೇಶದ ಯಶಸ್ಸಿಗೆ ಬೇಕಾದ ಸಕಲ ಸಿದ್ಧತೆಗಳು ಮತ್ತು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಯಿತು.

ಗದಗ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಎಲ್ಲಾ ಪದಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಕುರಿತು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಮಂಜುನಾಥ್ ಹರಿಜನ್ ಅವರು ನಿರೂಪಿಸಿದರು. ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಬಸವರಾಜ ಸಂಗಮೇಶ್ವರ್ ಅವರು ಸ್ವಾಗತ ಭಾಷಣ ಮಾಡಿದರು. ರಾಜ್ಯಾಧ್ಯಕ್ಷ ಚಂದ್ರಕಾಂತ ಎಸ್. ಕಾದ್ರೋಳ್ಳಿ ಅವರು ಸಂಘಟನೆಯ ಬಗ್ಗೆ ಹಾಗೂ ಭವಿಷ್ಯದ ಕಾರ್ಯಕ್ರಮಗಳ ಕುರಿತು ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
ಈ ಸುದ್ದಿ ಓದಿದ್ದೀರಾ? ಶಿರಸಿ | ಉಪವಿಭಾಗಾಧಿಕಾರಿ ಕಾವ್ಯ ರಾಣಿ ವರ್ಗಾವಣೆ, ಹುಣಸೂರು ಉಪವಿಭಾಗಕ್ಕೆ ನೇಮಕ
ವೇದಿಕೆ ಮೇಲೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಚಂದ್ರಕಾಂತ ಎಸ್. ಕಾದ್ರೋಳ್ಳಿ, ದಲಿತ ಹಿರಿಯ ಮುಖಂಡರಾದ ರಾಜೇಶ ದೇಶಬಾಗ, ಉತ್ತರ ಕರ್ನಾಟಕ ಯುವ ಘಟಕದ ಅಧ್ಯಕ್ಷ ಕಲ್ಲಪ್ಪ ಎಸ್. ಕಾದ್ರೋಳ್ಳಿ, ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಬಸವರಾಜ ಸಂಗಮೇಶ್ವರ್, ಧಾರವಾಡ ಜಿಲ್ಲಾ ಅಧ್ಯಕ್ಷ ಬಸವರಾಜ ಲಗಮವ್ವನವರ, ಬೆಳಗಾವಿ ಜಿಲ್ಲಾಧ್ಯಕ್ಷ ಶ್ರೀಕಾಂತ ಮ. ಮಾದರ, ರಾಜೇಶ್ ಪಾಟಣಕರ್, ಅರ್ಜುನ್ ಮಿಂಟಿ ಹಾಗೂ ವಕೀಲರಾದ ಶಿವರಾಜ್ ಸಂಗಮೇಶ್ವರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.





