ಶಿರಸಿ | ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನ ಜೀವ ಉಳಿಸಿದ ಪಯಾಜ್ (ಪಯ್ಯು) ಚೌಟಿ

Date:

ಶಿರಸಿ: ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನನ್ನ ಸಮಯಪ್ರಜ್ಞೆ ಮೆರೆದು ವ್ಯಕ್ತಿಯೊಬ್ಬರು ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಗರದ ಕಸ್ತೂರಬಾ ನಗರದಲ್ಲಿ ಇಂದು ನಡೆದಿದೆ.

ಪ್ರಾಣದ ಹಂಗು ತೊರೆದು ಬಾವಿಗಿಳಿದ ಪಯಾಜ್ ಚೌಟಿ ಎಂಬುವವರು ಮಗುವನ್ನು ಮೇಲಕ್ಕೆತ್ತುವ ಮೂಲಕ ಮಗುವಿಗೆ ಮರುಜನ್ಮ ನೀಡಿದ್ದಾರೆ.

ಘಟನೆಯ ವಿವರ: ಕಸ್ತೂರಬಾ ನಗರದ ನಿವಾಸಿಯಾದ ಪುಟ್ಟ ಬಾಲಕಿ ಭುವಿ (2) ಮನೆಯ ಆವರಣದಲ್ಲಿ ಆಟವಾಡುತ್ತಿದ್ದಳು. ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಈ ವೇಳೆ ಮನೆಯ ಹಿಂಭಾಗದ ಬಾವಿಯಿಂದ ಮಗುವಿನ ಅಳುವಿನ ಧ್ವನಿ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಕ್ಷಣ ಬಾವಿಯತ್ತ ಧಾವಿಸಿ ನೋಡಿದಾಗ, ಮಗು ಬಾವಿಯ ಒಳಗಿದ್ದ ಪಂಪ್ ಸೆಟ್‌ನ ಪೈಪ್ ಒಂದನ್ನು ಗಟ್ಟಿಯಾಗಿ ಹಿಡಿದುಕೊಂಡು ಪ್ರಾಣಾಪಾಯದಲ್ಲಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ಕುಟುಂಬದವರ ಆಕ್ರಂದನ ಕೇಳಿ ಸ್ಥಳೀಯರು ಜಮಾಯಿಸಿದ್ದಾರೆ.

ಇದೇ ವೇಳೆ ಬೆಂಗಳೂರಿಗೆ ಪ್ರಯಾಣ ಬೆಳೆಸಲು ಸಿದ್ಧರಾಗಿದ್ದ ಸಾರಿಕಾ ಸೇವಾ ಸಂಸ್ಥೆಯ ಸಂಸ್ಥಾಪಕ ಪಯಾಜ್ (ಪಯ್ಯು) ಚೌಟಿ ಅವರಿಗೆ ವಿಷಯ ತಿಳಿಯಿತು. ಒಂದು ಕ್ಷಣವೂ ವ್ಯರ್ಥ ಮಾಡದ ಪಯಾಜ್, ತಕ್ಷಣವೇ ಬಾವಿಯತ್ತ ಧಾವಿಸಿ. ಜನರ ನೆರವಿನೊಂದಿಗೆ ಬಾವಿಗಿಳಿದ ಅವರು, ಸುರಕ್ಷಿತವಾಗಿ ಮಗುವನ್ನು ಮೇಲೆ ತರುವಲ್ಲಿ ಯಶಸ್ವಿಯಾದರು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | LPG ಸಿಲಿಂಡರ್ ಅಭಾವ; ಗೃಹಿಣಿಯರ ನೆಮ್ಮದಿಗೆ ಭಂಗ

ಸಾವಿನ ದವಡೆಯಿಂದ ಮಗುವನ್ನು ಪಾರು ಮಾಡಿದ ಪಯಾಜ್ ಅವರನ್ನು ಕಂಡು ಬಾಲಕಿಯ ಅಜ್ಜಿ ಭಾವುಕರಾದರು. “ನಮ್ಮ ಮಗುವನ್ನು ಉಳಿಸಿಕೊಟ್ಟ ಇವರೇ ನನ್ನ ಪಾಲಿನ ದೇವರು” ಎಂದು ಕೃತಜ್ಞತೆ ಸಲ್ಲಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಪಯಾಜ್ ಚೌಟಿ ಅವರು, “ಆ ಪರಿಸ್ಥಿತಿಯಲ್ಲಿ ಯಾರು ಬಿದ್ದಿದ್ದರೂ ನಾನು ಇದನ್ನೇ ಮಾಡುತ್ತಿದ್ದೆ. ಮಗು ಪ್ರಾಣಾಪಾಯದಿಂದ ಪಾರಾಗಿದ್ದೇ ನನಗೆ ತೃಪ್ತಿ ತಂದಿದೆ,” ಎಂದು ವಿನಯದಿಂದ ನುಡಿದರು. ಸಾಹಸ ಪ್ರವೃತ್ತಿ ಮೆರೆದ ಪಯಾಜ್ ಚೌಟಿ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...