ಶಿರಸಿ | ನಾಲ್ಕೇ ದಿನಗಳಲ್ಲಿ ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹ 9.95 ಲಕ್ಷ ಮೌಲ್ಯದ ಸೊತ್ತು ವಶ

Date:

ಶಿರಸಿ: ನಗರದ ಮಾರಿಕಾಂಬಾ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಶಿರಸಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಘಟನೆ ನಡೆದ ಕೇವಲ ನಾಲ್ಕು ದಿನಗಳಲ್ಲಿ ಆರೋಪಿಯನ್ನು ಬಂಧಿಸಿ, ಕದ್ದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಘಟನೆ ವಿವರ: ರಾಮನಬೈಲ ನಿವಾಸಿ ಹಾಗೂ ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಹೇಶ ಪರಸಪ್ಪ ಬೋವಿ (31) ಬಂಧಿತ ಆರೋಪಿಯಾಗಿದ್ದಾನೆ. ಮಾರಿಕಾಂಬಾ ನಗರದ 3ನೇ ಕ್ರಾಸ್ ನಿವಾಸಿ ಶಾಂತಲಾ ಶಾಂತಾರಾಮ ಕಿಣಿ ಅವರು ಡಿ. 7 ರಂದು ತಮ್ಮ ಕುಟುಂಬದೊಂದಿಗೆ ಗೋವಾಕ್ಕೆ ತೆರಳಿದ್ದರು. ಡಿ. 8 ರಂದು ಬೆಳಗಿನ ಜಾವ ಮನೆಗೆ ಮರಳಿದಾಗ, ಮನೆಯ ಬೀಗ ಮುರಿದು ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿತ್ತು.

ಕಳ್ಳರು ಮನೆಯಿಂದ ಸುಮಾರು ₹ 1.20 ಲಕ್ಷ ನಗದು ಮತ್ತು ₹ 9.25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಗಂಭೀರತೆಯನ್ನು ಮನಗಂಡ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ ತಕ್ಷಣವೇ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ತಾಂತ್ರಿಕ ಸಾಕ್ಷ್ಯಾಧಾರಗಳು ಮತ್ತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಈ ವಿಶೇಷ ತಂಡವು ಗುರುವಾರ (ಡಿ.12) ರಂದು ಆರೋಪಿ ಮಹೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು. ವಿಚಾರಣೆ ವೇಳೆ ಆರೋಪಿ ಮಹೇಶ ತಾನು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಡಿಸೆಂಬರ್ 16 ಮತ್ತು 19ರಂದು ಲೋಕಾಯುಕ್ತ ಅಧಿಕಾರಿಗಳಿಂದ ಮುಂಡಗೋಡ, ಭಟ್ಕಳ ತಾಲ್ಲೂಕು ಭೇಟಿ

ಬಂಧಿತ ಆರೋಪಿಯಿಂದ ಪೊಲೀಸರು ₹ 8,75,000 ಮೌಲ್ಯದ ಚಿನ್ನಾಭರಣಗಳು, ₹ 70,000 ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ₹ 50,000 ಮೌಲ್ಯದ ಹೊಂಡಾ ಆಕ್ಟಿವಾ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡಿರುವ ಒಟ್ಟು ಸ್ವತ್ತಿನ ಮೌಲ್ಯ ₹ 9,95,000 ಆಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಎಸ್.ಪಿಗಳಾದ ಕೃಷ್ಣಮೂರ್ತಿ ಜಿ., ಜಗದೀಶ ನಾಯ್ಕ ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ, ಪಿ.ಎಸ್.ಐ (ಕಾನೂನು ಮತ್ತು ಸುವ್ಯವಸ್ಥೆ) ನಾಗಪ್ಪ ಬಿ. ಹಾಗೂ ಪಿ.ಎಸ್.ಐ (ತನಿಖೆ) ನಾರಾಯಣ ರಾಥೋಡ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...