ಶಿರಸಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಎಸ್‌ಡಿಪಿಐ ಕರೆ; ಸಂಭ್ರಮದ 77ನೇ ಗಣರಾಜ್ಯೋತ್ಸವ ಆಚರಣೆ

Date:

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಡಗರ ಮನೆಮಾಡಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸೋಶಿಯಲ್ ಡೆಮೋಕ್ರಿಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಸಂಭ್ರಮದ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವ ಕುರಿತು ಮಹತ್ವದ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾದ ರಿಯಾಜ್ ಶಿರಸಿ ಅವರು,

ಜನವರಿ 26 ನಮ್ಮ ದೇಶವು ಸಂವಿಧಾನಾತ್ಮಕ ಮೌಲ್ಯಗಳನ್ನು ಅಧಿಕೃತವಾಗಿ ಅಳವಡಿಸಿಕೊಂಡ ಐತಿಹಾಸಿಕ ದಿನವಾಗಿದೆ ಎಂದು ಸ್ಮರಿಸಿದರು. ಭಾರತದ ಗಣರಾಜ್ಯದ ಆತ್ಮವು ಸಮಾನತೆ, ಸ್ವಾತಂತ್ರ್ಯ, ಸೌಹಾರ್ದತೆ ಮತ್ತು ನ್ಯಾಯ ಎಂಬ ಭದ್ರವಾದ ಬುನಾದಿಯ ಮೇಲೆ ನಿಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೌಲ್ಯಗಳನ್ನು ಪ್ರತಿಯೊಬ್ಬ ನಾಗರಿಕನು ತನ್ನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿಗೆ ಅಗತ್ಯವಾಗಿದೆ ಎಂದು ಅವರು ಹೇಳಿದರು. ಗಣರಾಜ್ಯೋತ್ಸವವು ಕೇವಲ ಸಂಭ್ರಮದ ದಿನವಲ್ಲ, ಬದಲಿಗೆ ಇದು ನಮಗೆ ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ನೆನಪಿಸುವ ದಿನವಾಗಿದೆ.

ಧರ್ಮ, ಜಾತಿ ಅಥವಾ ಭಾಷೆಯ ಭೇದವಿಲ್ಲದೆ ಪ್ರತಿಯೊಬ್ಬ ನಾಗರಿಕನ ಗೌರವವನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ದೇಶದ ಸಂವಿಧಾನವನ್ನು ಉಳಿಸುವುದು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದು ಪ್ರಜ್ಞಾವಂತ ಸಮಾಜದ ಹೊಣೆಗಾರಿಕೆಯಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಂಕಾಳ ವೈದ್ಯ ಭರವಸೆ

ಈ ಬಾರಿಯ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಸಂವಿಧಾನದ ಉದಾತ್ತ ಆಶಯಗಳನ್ನು ಜೀವಂತವಾಗಿಡುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಬೇಕಿದೆ. ಸಮಾಜದಲ್ಲಿ ಕಂಡುಬರುವ ಅನ್ಯಾಯದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತುವ ಮೂಲಕ,

ಸಮಾನತೆ ಮತ್ತು ಸಹೋದರತ್ವದ ಭಾವನೆಯನ್ನು ಬೆಳೆಸುವ ದೃಢ ಸಂಕಲ್ಪವನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ರಿಯಾಜ್ ಶಿರಸಿ ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...