ಶಿರಸಿ | ಎಸ್‌ಡಿಪಿಐ ಸಂಘಟನಾ ಸಮಾವೇಶ ಯಶಸ್ವಿ; ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಬದಲಾವಣೆಗಾಗಿ ಸಂಕಲ್ಪ ಮತ್ತು ನ್ಯಾಯಕ್ಕಾಗಿ ಹೋರಾಟ ಎಂಬ ಧ್ಯೇಯವಾಕ್ಯದೊಂದಿಗೆ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಶಿರಸಿ ತಾಲೂಕು ಸಮಿತಿಯ ವತಿಯಿಂದ ನಗರದ ನೆಹರು ನಗರದ ರೆಹಮಾನಿಯ ಕಮ್ಯೂನಿಟಿ ಹಾಲ್‌ನಲ್ಲಿ ಪಕ್ಷದ ಸಮಾವೇಶವು ಯಶಸ್ವಿಯಾಗಿ ಜರುಗಿತು.

ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಜನಾಬ್ ಅಬ್ದುಲ್ ಹನ್ನಾನ್ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಪ್ರಮುಖವಾಗಿ ಕೇಂದ್ರ ಸರ್ಕಾರದ ಕರಾಳ ‘SIR’ ನೀತಿಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.

1000438860

ದೇಶದ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಮತ್ತು ಜನವಿರೋಧಿ ನೀತಿಗಳ ವಿರುದ್ಧ ಹೋರಾಡುವ ಅಗತ್ಯತೆಯನ್ನು ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೇಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಸಿದ್ಧತೆಗೆ ಕರೆ: ಮುಂಬರುವ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷವು, ತಳಮಟ್ಟದಿಂದ ಸಂಘಟನೆಯನ್ನು ಬಲಿಷ್ಠಗೊಳಿಸಲು ನಿರ್ಧರಿಸಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಪ.ಜಾತಿ–ಪಂಗಡದವರಿಗೆ ಮೊದಲ ಆದ್ಯತೆ: ಎಡಿಸಿ ಸಾಜಿದ್ ಮುಲ್ಲಾ

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾದ ರಿಯಾಜ್ ಶಿರಸಿ ಅವರು, “ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ಮತ್ತು ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಶಕ್ತಿಯುತಗೊಳಿಸಬೇಕಿದೆ,” ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಆರಿಫ್ ರಜಾ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸಲು ಸಮಾವೇಶದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...