ಶಿರಸಿ | ಬೇಡ್ತಿ-ವರದಾ ಯೋಜನೆಗೆ ಶಿವರಾಮ ಹೆಬ್ಬಾರ್ ವಿರೋಧ; ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ

Date:

ಉತ್ತರ ಕನ್ನಡ: ಪರಿಸರಕ್ಕೆ ಮಾರಕವಾಗಲಿರುವ ಬೇಡ್ತಿ-ವರದಾ ನದಿ ಜೋಡಣೆ ಎಂಬ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಇಂದು ಶಿರಸಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು.

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಶ್ರೀಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಯೋಜನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್ ಅವರು, ಈ ಯೋಜನೆಯು ಉತ್ತರ ಕನ್ನಡ ಜಿಲ್ಲೆಯ ಸಮೃದ್ಧ ನೈಸರ್ಗಿಕ ಪರಿಸರ ಮತ್ತು ಜೀವವೈವಿಧ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು. ಯಾವುದೇ ವೈಜ್ಞಾನಿಕ ಅಧ್ಯಯನ ನಡೆಸದೆ ರೂಪಿಸಲಾಗಿರುವ ಈ ಯೋಜನೆಯು ಸ್ಥಳೀಯ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಅರಣ್ಯ ಸಂಪತ್ತು ಮತ್ತು ಜನಜೀವನವನ್ನು ಬಲಿಗೊಟ್ಟು ಇಂತಹ ಯೋಜನೆಗಳನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ನದಿಗಳ ಸ್ವಾಭಾವಿಕ ಹರಿವನ್ನು ಬದಲಿಸುವುದರಿಂದ ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ಹಾಗೂ ಕುಡಿಯುವ ನೀರಿನ ಮೂಲಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಹೇಳಿದರು.

1000443152

ಅರಣ್ಯಾಧಾರಿತ ಜೀವನ ನಡೆಸುವ ಸಾವಿರಾರು ಕುಟುಂಬಗಳು ಬೀದಿಪಾಲಾಗುವ ಭೀತಿ ಎದುರಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ಯೋಜನೆಯನ್ನು ರದ್ದುಗೊಳಿಸಿ, ಜಿಲ್ಲೆಯ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಬಿಜೆಪಿಗೆ ಬಿಗ್ ಶಾಕ್; ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಯುವ ನಾಯಕ ರವಿ ಹಾವೇರಿ

ಈ ಬೃಹತ್ ಸಮಾವೇಶದಲ್ಲಿ ಪರಿಸರ ಹೋರಾಟಗಾರರು, ರೈತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಗ್ರಾಮಗಳ ನಾಗರಿಕರು ಭಾಗವಹಿಸಿದ್ದರು. ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನದಿಗಳ ಉಳಿವಿನ ಹೋರಾಟವನ್ನು ತೀವ್ರಗೊಳಿಸುವ ನಿರ್ಧಾರವನ್ನು ಏಕಮನಸ್ಕವಾಗಿ ಕೈಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...