ಶಿರಸಿ | ಶಿರಸಿ ಜ್ಯುವೆಲರಿ ಶಾಪ್‌ನಲ್ಲಿ ಕಳ್ಳತನ: ಆರೋಪಿಗಳು ಸೆರೆ, ಆಭರಣಗಳು ವಶ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ಒಟ್ಟು 2.23 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಇಮ್ರಾನ್ ಗಫಾರ್ ಇಕ್ಕೇರಿ(25), ಇಮ್ರಾನ್ ತಾಜುದ್ದೀನ್ ರಮಣೇದಾರ(22) ಮತ್ತು ಭಟ್ಕಳ ನಿವಾಸಿ ಅಮೀರ್ ಹಸನ್ ಬೇರಿ(27) ಎಂದು ಬಂಧಿತರನ್ನು ಗುರುತಿಸಲಾಗಿದೆ.

ಜುಲೈ 12ರ ರಾತ್ರಿ 8ರಿಂದ ಜುಲೈ 13ರ ಬೆಳಿಗ್ಗೆ 7:30ರ ನಡುವೆ ಕಳ್ಳರು ದಾಸನಕೊಪ್ಪದ ಜೀವನ ಶೇಟ್ ಎಂಬುವವರ ಮಾವನವರ ಮನೆ ಮೂಲಕ, ಅವರ ಅಂಗಡಿಯ ಮೇಲ್ಛಾವಣಿ ಒಡೆದು ಒಳನುಗ್ಗಿ ಕಳ್ಳತನ ಮಾಡಿದ ಕುರಿತು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡಲೇ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿ ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತ ಆರೋಪಿಗಳಿಂದ ವಿದೇಶಿ ಮಾದರಿಯ 127 ಮೂಗುತಿಗಳು(10 ಗ್ರಾಂ 320 ಮಿಲಿ, ಅಂದಾಜು ಮೌಲ್ಯ ₹83,000), ಹೊಸ ಬೆಳ್ಳಿಯ ಆಭರಣಗಳಾದ ದೇವರ ಮೂರ್ತಿಗಳು, ಕಾಲು ಉಂಗುರಗಳು, ದೇವರ ಮೀಸೆ, ದೇವರ ಹಸ್ತ ಮತ್ತು ಇತರೆ ದೇವರ ಚಿತ್ರಗಳಿರುವ ಬೆಳ್ಳಿ ಆಭರಣಗಳು(ಒಟ್ಟು 900 ಗ್ರಾಂ, ಅಂದಾಜು ಮೌಲ್ಯ ₹90,000) ಹಾಗೂ ಹಳೆಯ ಬೆಳ್ಳಿಯ ಆಭರಣಗಳಾದ ಕಾಲು ಚೈನುಗಳು, ಕಾಲು ಪಿಲ್ಲೆ, ಕಾಲು ಕಡಗಗಳು, ಕಾಲು ಉಂಗುರಗಳು ಮತ್ತು ಇತರೆ ಬೆಳ್ಳಿ ಆಭರಣಗಳು(ಒಟ್ಟು 746 ಗ್ರಾಂ, ಅಂದಾಜು ಮೌಲ್ಯ ₹50,500) ಸೇರಿದಂತೆ ಒಟ್ಟಾರೆ ₹2,23,500 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ ಜಿಲ್ಲಾ ಕೋರ್ಟ್‌ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯಕ್ಕೆ ಟೆಂಡರ್‌: ಏಜನ್ಸಿಗಳಿಂದ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಐಪಿಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-2 ಜಗದೀಶ್ ನಾಯ್ಕ್ ಮತ್ತು ಶಿರಸಿ ಉಪವಿಭಾಗದ ಡಿ‌‌ಎಸ್‌ಪಿ ಗೀತಾ ಪಿ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ವೃತ್ತ ನಿರೀಕ್ಷಕ ಶಶಿಕಾಂತ್ ವರ್ಮಾ ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಮಹಾಂತಪ್ಪ ಕುಂಬಾರ ಮತ್ತು ಸುನೀಲ್ ಕುಮಾರ್ ಬಿ ವೈ ಹಾಗೂ ಸಿಬ್ಬಂದಿಗಳಾದ ಅಬ್ದುಲ್ ಸಮ್ಮದ್ ಅನ್ಸಾರಿ, ಕುಮಾರ್ ಬಣಕಾರ, ಬಸವರಾಜ ಜಾಡರ್, ಮಂಜಪ್ಪ ಪಿ, ರಾಜೇಶ ಪಿ ಎಂ, ದಿವಾನ ಅಲಿ, ಮಹಾದೇವಪ್ಪ ವಾಲಿಕಾರ, ರೇವಪ್ಪ ಬಂಕಾಪುರ ಮತ್ತು ಸಂಚಾರ ಠಾಣೆ ಶಿರಸಿ ಸಿಡಿಆರ್ ವಿಭಾಗದ ಉದಯ ಗುನಗಾ ಅವರು ಕಾರ್ಯಾಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...