ಶಿರಸಿ | ಹೆಗಡೆಕಟ್ಟಾ ಯುವಕನ ಅಪ್ರತಿಮ ಸಾಧನೆ: 25ರ ಹರೆಯದಲ್ಲೇ ಸಿವಿಲ್ ನ್ಯಾಯಾಧೀಶರಾಗಿ ಸುಮಂತ್ ಆಯ್ಕೆ

Date:

ಶಿರಸಿ: ಕಠಿಣ ಪರಿಶ್ರಮ ಮತ್ತು ಛಲವಿದ್ದರೆ ಯುವ ವಯಸ್ಸಿನಲ್ಲೇ ಉನ್ನತ ಗುರಿ ತಲುಪಬಹುದು ಎಂಬುದನ್ನು ಶಿರಸಿ ತಾಲೂಕಿನ ಹೆಗಡೆಕಟ್ಟಾದ ಯುವ ಪ್ರತಿಭೆ ಸುಮಂತ್ ಮಂಜುನಾಥ್ ನಾಯ್ಕ್ ಸಾಬೀತುಪಡಿಸಿದ್ದಾರೆ.

2025ನೇ ಸಾಲಿನ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆಯುವ ಮೂಲಕ ಸುಮಂತ್ ಅವರು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಕೇವಲ 25ನೇ ವಯಸ್ಸಿನಲ್ಲಿ ಈ ಗೌರವಾನ್ವಿತ ಹುದ್ದೆಯನ್ನು ಅಲಂಕರಿಸುತ್ತಿರುವ ಸುಮಂತ್ ಅವರ ಸಾಧನೆ ಜಿಲ್ಲೆಗೆ ಹೆಮ್ಮೆ ತಂದಿದೆ. ಇವರು ಬೆಂಗಳೂರು ಲೋಕಾಯುಕ್ತದ ಸರ್ಕಾರಿ ಅಭಿಯೋಜಕರಾದ ಮಂಜುನಾಥ್ ನಾಯ್ಕ್ ಹಾಗೂ ವಕೀಲೆ ಸುಜಾತಾ ನಾಯ್ಕ್ ದಂಪತಿಯ ಪುತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರು ಮೂಲತಃ ಶಿರಸಿ ತಾಲೂಕಿನ ಹೆಗಡೆಕಟ್ಟಾ ಗ್ರಾಮದವರಾಗಿದ್ದಾರೆ ಇವರ ಈ ಸಾಧನೆ ಪರಿಚಯಸ್ಥರಲ್ಲಿ ಮತ್ತು ಕುಟುಂಬದವರಲ್ಲಿ ಸಂತಸ ತಂದಿದೆ. ಕೇವಲ ಓದಿನಲ್ಲಿ ಮಾತ್ರವಲ್ಲದೆ, ಸುಮಂತ್ ಅವರು ಪಠ್ಯೇತರ ಚಟುವಟಿಕೆಗಳಲ್ಲೂ ಸೈ ಎನಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುಮಟಾ | ಗ್ರಾಮಸ್ಥರ ಹೋರಾಟಕ್ಕೆ ಜಯ; ಮಿರ್ಜಾನ ಕೋಟೆ ರಸ್ತೆಗೆ ಗೇಟ್ ಅಳವಡಿಕೆ ನಿರ್ಧಾರ ಕೈಬಿಟ್ಟ ಪಂಚಾಯತ್.

ರಾಜ್ಯ ಮಟ್ಟದ ಚೆಸ್ ಕ್ರೀಡಾಪಟುವಾಗಿ ಗುರುತಿಸಿಕೊಂಡಿರುವ ಇವರು, ಬೌದ್ಧಿಕ ಕ್ರೀಡೆಯಲ್ಲೂ ತಮ್ಮ ಚತುರತೆ ಮೆರೆದಿದ್ದಾರೆ. ಇಂದಿನ ಯುವ ಪೀಳಿಗೆಗೆ ಸುಮಂತ್ ಅವರ ಈ ಸಾಧನೆ ಒಂದು ದೊಡ್ಡ ಸ್ಫೂರ್ತಿಯಾಗಿದ್ದು, ಜಿಲ್ಲೆಯ ಕೀರ್ತಿಯನ್ನು ರಾಜ್ಯ ಮಟ್ಟದಲ್ಲಿ ಬೆಳಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...