ಶಿರಸಿ | ಮಳೆ ಬಂದರೆ ಹೊಂಡ, ಬಿಸಿಲಾದ್ರೆ ಧೂಳು: ಭೀಮಘರ್ಜನೆಯ ವಿಡಿಯೋ ವೈರಲ್

Date:

ಶಿರಸಿ ನಗರದ ಪ್ರಮುಖ ರಸ್ತೆಗಳ ದುಸ್ಥಿತಿಯಿಂದ ನರಳುತ್ತಿರುವ ಸಾರ್ವಜನಿಕರ ಪರವಾಗಿ ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಅವರು ಧೂಳಿನ ರಾಶಿ ಹಾಗೂ ಅವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಅವರು, “ಮಳೆ ಬಂದಾಗ ಹೊಂಡಗಳ ರಾಶಿ, ಬಿಸಿಲು ಬಿದ್ದಾಗ ಧೂಳಿನ ರಾಶಿ” ಇದೇ ಶಿರಸಿಯ ವಾಸ್ತವ ಚಿತ್ರ! ಎಂದು ಸರ್ಕಾರ ಮತ್ತು ವಿರೋಧ ಪಕ್ಷದವರ ವಿರುದ್ಧ ವ್ಯಂಗ್ಯವಾಡಿದರು. ಅವರು ಸ್ಥಳದಲ್ಲೇ ಧೂಳಿನಿಂದ ಆವೃತವಾದ ರಸ್ತೆಯಲ್ಲಿ ನಿಂತು ಮಾತನಾಡಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಬೀಳುತ್ತಿರುವ ದುಷ್ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಮದ್ಯಪಾನ ಮಾಡುವವರ ಲಿವರ್ ಹೋಗುತ್ತೆ ಅಂತಾರೆ, ಆದರೆ ಶಿರಸಿಯ ರಸ್ತೆಯಲ್ಲಿ ಎರಡು ತಿಂಗಳು ಓಡಾಡಿದ್ರೆ ಸಾಕು, ಆರೋಗ್ಯವೇ ಹಾಳಾಗುತ್ತದೆ, ಎಂದು ಟೀಕಿಸಿದ ಅವರು, ಯುವಜನತೆಗೆ ಒಗ್ಗಟ್ಟಾಗಿ ಧ್ವನಿ ಎತ್ತುವಂತೆ ಕರೆ ನೀಡಿದರು. ನಗರದ ಪ್ರಮುಖ ಭಾಗಗಳಲ್ಲಿ ರಸ್ತೆ ಕಾಮಗಾರಿ ವಿಳಂಬ ಆಗುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದು, ಜನರ ನರಳಾಟದ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆ ಆಗುತ್ತಿದ್ದು, ಸ್ಥಳೀಯರ ಮತ್ತು ಯುವಕರ ಬೆಂಬಲ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಪಿಎಂಎವೈ ಮನೆಗಳ ಕಾಮಗಾರಿ ನಿಧಾನ; ಸತ್ಯಾಗ್ರಹ ಆರಂಭಿಸಿದ ಫಲಾನುಭವಿಗಳು

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಪುನೀತ್ ಮರಾಠೇ, ಹರ್ಷ ನಾಯ್ಕ್, ಆದಿತ್ಯ ಹೆಗಡೆ, ಪ್ರಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...