ಶಿರಸಿ | ಆಯ್ದ ಹತ್ಯೆಗಳ ಬಗ್ಗೆ ಮಾತ್ರ ಆಕ್ರೋಶವೇಕೆ? ಉಪೇಂದ್ರ ಪೈ–ಅನಂತಮೂರ್ತಿ ಹೆಗಡೆಗೆ ಅರ್ಜುನ್ ಮಿಂಟಿ ನೇರ ಪ್ರಶ್ನೆ

Date:

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಮುಖಂಡರ ನಡೆಯನ್ನು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ನಗರದ ನೆಮ್ಮದಿ ಕುಟೀರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪೇಂದ್ರ ಪೈ ಮತ್ತು ಅನಂತಮೂರ್ತಿ ಹೆಗಡೆ ಅವರ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರು. ಯಲ್ಲಾಪುರ ಹತ್ಯೆ ಪ್ರಕರಣದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಈ ಮುಖಂಡರು, ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ ಎಂದು ಮಿಂಟಿ ಪ್ರಶ್ನಿಸಿದರು.

ಅನ್ಯ ಕೋಮಿನವರು ಮಾಡುವ ಅಪರಾಧ ಮಾತ್ರ ಇವರಿಗೆ ಅಪರಾಧವಾಗಿ ಕಾಣಿಸುತ್ತದೆ. ಆದರೆ ಸ್ವಜಾತಿಯವರೇ ಜಾತಿಯ ಕಾರಣಕ್ಕೆ ಮಾಡುವ ಕೊಲೆಗಳು ಇವರಿಗೆ ಕೇವಲ ಸಾಮಾನ್ಯ ಕೊಲೆಗಳಂತೆ ಭಾಸವಾಗುತ್ತವೆ. ಸಮಾಜದಲ್ಲಿ ಇಂದಿಗೂ ನಡೆಯುತ್ತಿರುವ ಅಸ್ಪಶ್ಯತೆ ಆಚರಣೆಗಳ ವಿರುದ್ಧ ಈ ಮುಖಂಡರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆ ನಡೆದ ಪರೇಶ್ ಮೇಸ್ತ ಪ್ರಕರಣವನ್ನು ಉಲ್ಲೇಖಿಸಿದ ಅವರು, ಅಂದು ನೀಡಲಾದ ಪ್ರಚೋದನೆಯಿಂದಾಗಿ ಅನೇಕ ಬಡ ದಲಿತ ಮತ್ತು ಹಿಂದುಳಿದ ವರ್ಗದ ಯುವಕರ ಜೀವನ ಹಾಳಾಗಿದೆ. ಈಗ ಮತ್ತೊಮ್ಮೆ ಅಂತಹದ್ದೇ ವಾತಾವರಣ ನಿರ್ಮಿಸಲು ಇವರು ಹವಣಿಸುತ್ತಿದ್ದಾರೆ.

ಮತ್ತೊಂದು ‘ಪರೇಶ್ ಮೇಸ್ತ’ ಪ್ರಕರಣ ಸೃಷ್ಟಿಸಲು ಸಾಧ್ಯವಾಗಲಿಲ್ಲ ಎಂಬ ದುಃಖ ಇವರನ್ನು ಕಾಡುತ್ತಿರುವಂತಿದೆ ಎಂದು ಟೀಕಿಸಿದರು. ಇಂತಹ ಪ್ರಚೋದನಕಾರಿ ಹೇಳಿಕೆಗಳಿಗೆ ಶಿರಸಿ, ಸಿದ್ದಾಪುರ ಸೇರಿದಂತೆ ಜಿಲ್ಲೆಯ ದಲಿತರು ಮತ್ತು ಹಿಂದುಳಿದ ವರ್ಗದವರು ಮರುಳಾಗಬಾರದು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಳಚಿದ ಕಬ್ಬಿನ ಟ್ರೈಲರ್ ಕೊಂಡಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!

ಯಾರೋ ನೀಡುವ ಪ್ರಚೋದನೆಗೆ ಒಳಗಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಅವರು ಜನತೆಯಲ್ಲಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅಮಿತ್ ಜೋಗಳೇಕರ್, ತಾಲೂಕು ಉಪಾಧ್ಯಕ್ಷ ರಾಜೇಶ್ ಕೆ., ಸಂಘಟನಾ ಕಾರ್ಯದರ್ಶಿ ಹರ್ಷ, ಹಾಗೂ ಅಕ್ಷಯ್ ಮಡಗಾವಂಕರ್, ಪ್ರಶಾಂತ್ ದಾವಣಗೆರೆ, ಗುರುರಾಜ್ ಮಿಂಟಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...