ಗುಡಿಬಂಡೆ | ನಿವೇಶನ ವಿವಾದ; ಯುವಕನಿಗೆ ಮಾರಕಾಸ್ತ್ರದಿಂದ ಹಲ್ಲೆ

Date:

ನಿವೇಶನ ವಿವಾದ ಹಿನ್ನೆಲೆ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಬೀಚಗಾನಹಳ್ಳಿ ಗ್ರಾಮದ ಯುವಕ ಸಾಯಿನಾಥ್‌ ಹಲ್ಲೆಗೊಳಗಾದ ಯುವಕ. ಅದೇ ಗ್ರಾಮದ ನರಸಿಂಹಮೂರ್ತಿ ಹಲ್ಲೆ ಮಾಡಿರುವ ವ್ಯಕ್ತಿ.

IMG 20250430 WA0026
ಹಲ್ಲೆ ನಡೆಸಿರುವ ವ್ಯಕ್ತಿ ನರಸಿಂಹಮೂರ್ತಿ

ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ನಿವೇಶನದ ವಿಚಾರದಲ್ಲಿ ಈ ಹಿಂದೆ ಗಲಾಟೆ ನಡೆದಿತ್ತು. ಅದೇ ಕಾರಣಕ್ಕೆ ಇಂದು ಬೆಳಗ್ಗೆ ನರಸಿಂಹಮೂರ್ತಿ ಎಂಬಾತ ಮಾರಕಾಸ್ತ್ರಗಳಿಂದ ಸಾಯಿನಾಥ್‌ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಕುತ್ತಿಗೆ ಮತ್ತು ಬೆನ್ನಿನ ಭಾಗಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ತದ ಮಡುವಿನಲ್ಲಿದ್ದ ಸಾಯಿನಾಥ್‌ ಎಂಬಾತನನ್ನು ಸ್ಥಳೀಯರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...