ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಬೆಂಗಳೂರು ʼಕೌಶಲ್ಯ ಶೃಂಗಸಭೆ-2025ʼ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಲಲಿತ್ ಅಶೋಕ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಕೌಶಲ್ಯ ಶೃಂಗಸಭೆ-2025ರಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ್ ಆರ್ ಪಾಟೀಲ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ಅಂಗ ಸಂಸ್ಥೆಗಳಿಗೆ ನೀಡುವ ಕೌಶಲ್ಯ ಶೃಂಗ ಸಭೆ 2025ರ ಪ್ರಶಸ್ತಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಾವಿಕೆರೆ ಗ್ರಾಮ ಪಂಚಾಯತಿಯ ʼಸ್ಫೂರ್ತಿ ಸಂಜೀವಿನಿʼ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ʼಹಿರಿಹೊನ್ನಪ್ಪ ವಿಕಾಸ ಮಹಿಳಾ ಸ್ವ ಸಹಾಯ ಸಂಘʼ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ʼಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯ ಸಂಘʼ, ಕಲಬುರಗಿಯ ಅಳಂದ ತಾಲ್ಲೂಕಿನ ಗುಂಜ ಬಬಲಾದ ಗ್ರಾ ಪಂಚಾಯತಿಯ ಗಂಗಾ ಪರಮೇಶ್ವರಿ ಒಕ್ಕೂಟದ ʼಚೆನ್ನಮ್ಮ ಸ್ವ ಸಹಾಯ ಸಂಘʼ, ಚಿತ್ರದುರ್ಗ ಜಿಲ್ಲೆಯ ಹಿರಯೂರು ತಾಲ್ಲೂಕಿನ ವಿವಿಪುರ ಗ್ರಾಮ ಪಂಚಾಯತಿಯ ಝಾನ್ಸಿರಾಣಿ ಮಹಿಳಾ ಒಕ್ಕೂಟದ ʼಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಗುಂಪುʼ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ನಡವಿ ಗ್ರಾಮ ಪಂಚಾಯತಿಯ ಶ್ರೀ ರಾಮಲಿಂಗೇಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ʼತಾಯಮ್ಮದೇವಿ ಸ್ವ-ಸಹಾಯ ಗುಂಪುʼ, ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆಯ ಶ್ರೀದುರ್ಗಾ ಪ್ರದೇಶ ಮಟ್ಟದ ಒಕ್ಕೂಟದ ʼದಿವ್ಯಜ್ಯೋತಿ ನಿರಂತರ ಉಳಿತಾಯ ಗುಂಪುʼ, ಬೆಂಗಳೂರು ನಗರ ಜಿಲ್ಲೆಯ ಪಶ್ಚಿಮ ನಗರ ಪಾಲಿಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸರೋಜಿನಿ ನಾಯ್ಡು ಪ್ರದೇಶ ಮಟ್ಟದ ಒಕ್ಕೂಟದ ʼಅನ್ನಪೂರ್ಣೇಶ್ವರಿ ಮಹಿಳಾ ಸ್ವ-ಸಹಾಯ ಸಂಘʼ ಹಾಗೂ ರಾಯಚೂರು ಜಿಲ್ಲೆಯ ರಾಯಚೂರು ಮಹಾನಗರ ಪಾಲಿಕೆಯ ಗಣೇಶ ಪ್ರದೇಶ ಮಟ್ಟದ ಒಕ್ಕೂಟದ ʼಅಕ್ಕ ಮಹಾದೇವಿ ಮಹಿಳಾ ಸ್ವ-ಸಹಾಯ ಸಂಘʼ ಅತ್ಯುತ್ತಮ ಮಹಿಳಾ ಸ್ವ ಸ-ಸಹಾಯ ಸಂಘ ಪ್ರಶಸ್ತಿಗೆ ಭಾಜನವಾಗಿವೆ.
ಇದನ್ನೂ ಓದಿ: ಈ ದಿನ ಸಂಪಾದಕೀಯ | ಹರಿಯಾಣದ ‘ಮಹಾ ಮತಗಳ್ಳತನ’ ಮತ್ತು ಚುನಾವಣಾ ಆಯೋಗವೆಂಬ ಮೋದಿ ‘ಪಂಜರದ ಗಿಳಿ’
ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ, ಕೆಎಸ್ ಡಿಎ ಅಧ್ಯಕ್ಷ ಡಾ. ಇ ವಿ ರಮಣರೆಡ್ಡಿ, ಸಂಜೀವಿನಿ- ಕೆಎಸ್ ಆರ್ ಎಲ್ ಪಿಎಸ್ ಅಭಿಯಾನದ ಅಪರ ನಿರ್ದೇಶಕ ಶ್ರೀನಿವಾಸ್ ಎಂ ಹಾಗೂ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಗಣ್ಯರು ಉಪಸ್ಥಿತರಿದ್ದರು.





