ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ SKSSF ತುಂಬೆ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 30 ರಂದು ದ್ರಿಕ್ಸ್ ಮಜ್ಲಿಸ್ ವಾರ್ಷಿಕ ಹಾಗೂ ಸಮಸ್ತ 100 ನೇ ವಾರ್ಷಿಕ ಸಮ್ಮೇಳನದ ಪ್ರಚಾರ ಸಮ್ಮೇಳನ ಹಾಗೂ ಜ. 31 ರಂದು ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸಮಸ್ತ ಮುಷಾವರ ಸದಸ್ಯರಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್, ಶೈಖುನಾ ಅಬ್ದುಲ್ ಖಾದರ್ ಖಾಸಿಮಿ ಬಂಬ್ರಾಣ ಉಸ್ತಾದ್, ಅಸಯ್ಯಿದ್ ಸಾಬಿಖಲಿ ಶಿಹಾಬ್ ತಂಙಳ್ ಪಾಣಕ್ಕಾಡ್, SKSSF ಜಿಲ್ಲಾಧ್ಯಕ್ಷರಾದ ಅಸಯ್ಯಿದ್ ಅಮೀರ್ ತಂಙಳ್ ಕಿನ್ಯಾ, ದ್ರಿಕ್ಸ್ ಮಜ್ಲಿಸ್ ಗೆ ನೇತೃತ್ವ ನೀಡುವ ಅಸಯ್ಯಿದ್ ಇಬ್ರಾಹಿಂ ಬಾತಿಷ್ ತಂಙಳ್ ಆನೆಕ್ಕಲ್, ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್ ಗೆ ನೇತೃತ್ವ ನೀಡುವ ವಲಿಯುದ್ದೀನ್ ಫೈಝಿ ವಾಯಕ್ಕಾಡ್, SKSSF ಬಂಟ್ವಾಳ ವಲಯಾಧ್ಯಕ್ಷರಾದ ಇರ್ಷಾದ್ ದಾರಿಮಿ ಮಿತ್ತಬೈಲ್,ಸಮಸ್ತ ಪ್ರಚಾರ ಸಮ್ಮೇಳನದ ಮುಖ್ಯ ಪ್ರಭಾಷಕರಾದ ತುಂಬೆ ಮಹಲ್ ಖತೀಬ್ ಅಬೂಸ್ವಾಲಿಹ್ ಫೈಝಿ ಅಕ್ಕರಂಗಡಿ, ಹಾಗೂ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ , ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಯು.ಟಿ ಇಫ್ತಿಕಾರ್, ತುಂಬೆ ಗ್ರೂಫ್ ಕೊಲ್ಲಿ ರಾಷ್ಟ್ರದ ಅಧ್ಯಕ್ಷರಾದ ತುಂಬೆ ಮೊಹಿದೀನ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಅನಿ ಟ್ರೇಡಿಂಗ್ ಕಂಪೆನಿ ಮಂಗಳೂರು ಮಾಲಕರಾದ ಲತೀಫ್ ಗುರುಪುರ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತುಂಬೆ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಿ ಅಬ್ದುಲ್ ಸಲಾಂ ,ಮುಹಿಯ್ಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾದ ಇಂತಿಯಾಝ್ ಆಲ್ಫಾ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ರೋಯಲ್ ಗ್ರೂಫ್ ಬೆಂಗಳೂರು ಮಾಲಕರಾದ ಉಚ್ಚಿಲ ಆದಂ ಸಲಾಂ ತುಂಬೆ, SKSSF ತುಂಬೆ ಶಾಖಾ ಅಧ್ಯಕ್ಷರಾದ ಮುಹಮ್ಮದ್ ಜಾಫರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಟಿ ಕೆ ಶರೀಫ್ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




