ಬೆಂಗಳೂರು | 10 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ; ವಿಡಿಯೋ ಹಂಚಿಕೊಂಡ ವ್ಲಾಗರ್‌

Date:

ಬಿಟಿಎಂ ಲೇಔಟ್‌ನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ 10 ವರ್ಷದ ಬಾಲಕ ತನಗೆ ಕಿರುಕುಳ ನೀಡಿದ್ದಾನೆ ಎಂದು ಬೆಂಗಳೂರು ಮೂಲದ ಯೂಟ್ಯೂಬರ್ ಒಬ್ಬರು ಆರೋಪಿಸಿದ್ದಾರೆ. ಇದರ ವಿಡಿಯೋವನ್ನು ಕೂಡಾ ಹಂಚಿಕೊಂಡಿದ್ದಾರೆ.

ಯೂಟ್ಯೂಬರ್ ನೇಹಾ ಬಿಸ್ವಾಲ್ ಕೆಲಸದಿಂದ ಹಿಂತಿರುಗುವಾಗ ವಿಡಿಯೋ ಬ್ಲಾಗ್ ಅನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ಬೈಸಿಕಲ್‌ನಲ್ಲಿ ಸಾಗುತ್ತಿದ್ದ ಬಾಲಕ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ಎಸಗಿದ್ದಾನೆ.

ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಂಗಳೂರು ಪೊಲೀಸರು ವಿಡಿಯೋದ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಂಗಳೂರು | ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಿಕೃತ ಕಾಮಿ; ಆಸ್ಪತ್ರೆ ವಾರ್ಡ್​ ಬಾಯ್ ಬಂಧನ

ಬಿಟಿಎಂ ಲೇಔಟ್‌ನಲ್ಲಿ ಪಿಜಿಯಲ್ಲಿರುವ ಬಿಸ್ವಾಲ್ ಈ ಘಟನೆಯ ಬಳಿಕ ಆಘಾತಕ್ಕೆ ಒಳಗಾಗಿದ್ದು ಅತ್ತು ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

“ಈ ರೀತಿ ನನಗೆ ಎಂದಿಗೂ ಸಂಭವಿಸಿಲ್ಲ. ನಾನು ನಿಜವಾಗಿಯೂ ತುಂಬಾ ದುಖಃವಾಗಿದೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಿದ್ದೆ. ಆ ಈ ಹುಡುಗ ಆರಂಭದಲ್ಲಿ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ. ಬಳಿಕ ಯು-ಟರ್ನ್ ಮಾಡಿ ನನ್ನ ಕಡೆಗೆ ಬಂದು, ನನ್ನ ಗೇಲಿ ಮಾಡಿದ. ಬಳಿಕ ನನಗೆ ಲೈಂಗಿಕ ಕಿರುಕುಳ ನೀಡಿದ” ಎಂದು ಬಿಸ್ವಾಲ್ ಹೇಳಿದ್ದಾರೆ.

“ಮೊದಲು ನನ್ನನ್ನು ಗೇಲಿ ಮಾಡಿದನು. ಬಳಿಕ ಕ್ಯಾಮೆರಾದಲ್ಲಿ ಹೇಗೆ ಮಾತನಾಡುತ್ತಿದ್ದೇನೆ ಎಂದು ಅನುಕರಿಸಿದರು. ಅದಾದ ಬಳಿಕ ನನಗೆ ಕಿರುಕುಳ ನೀಡಿದನು” ಎಂದು ಯುವತಿ ಆರೋಪಿಸಿದ್ದಾರೆ.

ಬಾಲಕನು ಓಡಿಹೋಗಲು ಪ್ರಯತ್ನಿಸಿದ್ದು, ಸಹಾಯಕ್ಕಾಗಿ ಕೂಗಿದ ನಂತರ ಸ್ಥಳೀಯ ಜನರು ಹಿಡಿದಿದ್ದಾರೆ. ಘಟನೆಯ ವಿಡಿಯೋವನ್ನು ತೋರಿಸಿದ ನಂತರವೇ ಜನರು ಆಕೆಯನ್ನು ನಂಬಿದ್ದಾರೆ ಎಂದು ಬಿಸ್ವಾಲ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...