ಉಡುಪಿ | “SIR” ಸಂವಿಧಾನದ ಆಶಯಕ್ಕೆ ವಿರುದ್ದ, ದುರ್ಬಲರ ಮತದಾನದ ಹಕ್ಕಿಗೆ ಅಪಾಯ – ಶಿವ ಸುಂದರ್

Date:

ಸಂವಿಧಾನದ ಆಶಯದಂತೆ ನಡೆದ ಯಾವ ಪರಿಷ್ಕರಣೆಯನ್ನು ಯಾರೂ ವಿರೋಧಿಸಿಲ್ಲ. ಕಾಲ ಕಾಲಕ್ಕೆ ಪರಿಷ್ಕರಣೆ ನಡೆಯಲೇ ಬೇಕು. ನಾವು ಯಾರು ಕೂಡ ಪರಿಷ್ಕರಣೆಯ ವಿರೋಧಿಗಳಲ್ಲ. ಆದರೆ ಈ ವಿಶೇಷ ಪರಿಷ್ಕಣೆಯು ಸಂವಿಧಾನದ ಆಶಯದ ವಿರುದ್ಧ ಇರುವುದರಿಂದ ಇದರ ಕುರಿತು ಅಪಸ್ವರ ವ್ಯಕ್ತವಾಗುತ್ತಿದೆ. ಇದರಿಂದಾಗಿ ಈ ದೇಶದ ದುರ್ಬಲ ವರ್ಗದ ಜನ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಚಿಂತಕ ಶಿವ ಸುಂದರ್ ಅಭಿಪ್ರಾಯ ಪಟ್ಟರು.

ಅವರು ಇಂದು ಕಿದಿಯೂರು ಹೊಟೇಲಿನ ಮಾಧವ ಕೃಷ್ಣ ಸಭಾಂಗಣದಲ್ಲಿ ಸಾಲಿಡಾರಿಟಿ ಉಡುಪಿ ಜಿಲ್ಲಾ ವತಿಯಿಂದ ಆಯೋಜಿಸಲಾದ ವಕ್ಫ್ ಅಪಪ್ರಚಾರ ಮತ್ತು ವಾಸ್ತವ ಪುಸ್ತಕ ಬಿಡುಗಡೆ ಮತ್ತು SIR ಕುರಿತಾದ ವಿಚಾರ ವಿನಿಮಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಈ ದೇಶದ ಚುನಾವಣೆಯನ್ನು ಸಂಘಟಿಸುವುದು, ನಿಯಂತ್ರಿಸುವುದು ಮತ್ತು ಮಾರ್ಗದರ್ಶನ ಮಾಡುವುದು ಚುನಾವಣಾ ಆಯೋಗ ಪ್ರಮುಖ ಉದ್ದೇಶವಾಗಿದೆ.ಮುಕ್ತ ನಿರ್ಭಿತ ಚುನಾವಣೆ ನಡೆಸುವುದು ಆಯೋಗದ ಕರ್ತವ್ಯ. 18 ವರ್ಷ ತುಂಬಿದ ಎಲ್ಲರೂ ಈ ದೇಶದಲ್ಲಿ ಮತದಾನ ಮಾಡಲು, ಅರ್ಹರು. ಯಾವುದೇ ಪಕ್ಷಪಾತ ಇಲ್ಲದೆ ಎಲ್ಲ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುವ ವಾತಾವರಣವನ್ನು ಚುನಾವಣಾ ಆಯೋಗ ನಿರ್ಮಾಣ ಮಾಡಬೇಕಾಗಿದೆ. ಅದಕ್ಕೆ ಪೂರಕವಾದ ಕ್ರಮಗಳನ್ನು ಮಾತ್ರ ಮಾಡಲು ಅದಕ್ಕೆ ಅಧಿಕಾರವಿದೆ. ಈ ಉದ್ದೇಶವನ್ನು ಈಡೇರಿಸಲು ಚುನಾವಣಾ ಆಯೋಗ ಮತಪಟ್ಟಿಯನ್ನು ಪರಿಷ್ಕರಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದಗಗಹಹ

ಈ ದೇಶದಲ್ಲಿ ಹಿಂದೂ ಮುಸ್ಲಿಮ್, ಬಡವ ಶ್ರೀಮಂತ, ದಲಿತರು ಯಾರೇ ಆದರೂ ಕೂಡ ಮತದಾನ ಮಾಡಲು, ಚುನಾವಣೆಯಲ್ಲಿ ಭಾಗವಹಿಸಲು ಅರ್ಹರು. ಇಂದು ಚುನಾವಣಾ ಆಯೋಗ ಹನ್ನೊಂದು ದಾಖಲಾತಿಗಳ ಪಟ್ಟಿಯನ್ನು ಒದಗಿಸಿ ಇದರಲ್ಲಿ ಯಾವುದಾದರೂ ಇರಬೇಕೆಂದು ಕಡ್ಡಾಯಗೊಳಿಸುತ್ತಿದೆ. ವಿಶೇಷ ಪರಿಷ್ಕೃರಣೆಯ ಹೆಸರಿನಲ್ಲಿ ದೊಡ್ಡ ಸಂಖ್ಯೆಯ ಜನರು‌ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಚುನಾವಣಾ ಆಯೋಗ ಪಟ್ಟಿ ಮಾಡಿರುವ ದಾಖಲಾತಿಗಳು ಈ ದೇಶದ ಅರ್ಧದಷ್ಟು ಜನರ ಬಳಿ ಇಲ್ಲ. ಮುಖ್ಯವಾಗಿ ಬಡವರಲ್ಲಿ ಇಲ್ಲ‌. ಈ ವಿಶೇಷ ಪರಿಷ್ಕೃರಣೆಯಿಂದ ಅವರು ಅವರ ಹಕ್ಕನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಜನರು ಸರಕಾರವನ್ನು ಚುನಾಯಿಸಬೇಕು. ಆದರೆ ಇಂದು ಸರಕಾರ ತಮಗೆ ಯಾರೂ ಮತದಾನ ಮಾಡಬೇಕೆಂದು ಆಯ್ಕೆ ಮಾಡುತ್ತದೆ. ಈ ಪ್ರಕ್ರಿಯೆಯಿಂದ ಅಲ್ಪಸಂಖ್ಯಾತರು, ದುರ್ಬಲರು, ದಲಿತರು ವ್ಯಾಪಕ ಸಮಸ್ಯೆಗೀಡಾಗುತ್ತಾರೆ. ಈ ವಿಶೇಷ ಪರಿಷ್ಕೃರಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಬಿಹಾರ ಚುನಾವಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರಿದೆ ಎಂಬುವುದು ನಮ್ಮ ಮುಂದಿರುವಾಗ ಇದರ ಕುರಿತು ಜನ ಜಾಗೃತಿ ಅಗತ್ಯ. ಅನಗತ್ಯವಾಗಿ ಚುನಾವಣಾ ಆಯೋಗ ಸಂವಿಧಾನದ ಆಶಯದ ವಿರೋಧಿ ನೀತಿಗಳಿಂದ ಬಡವರು ತಮ್ಮ ಹಕ್ಕನ್ನು ಕಳೆದುಕೊಳ್ಳುವಂತಾಗಬಾರದು ಎಂದರು.

ಸನ್ಮಾರ್ಗ ವಾರ ಪತ್ರಿಕೆಯ ಸಂಪಾದಕ ಎ.ಕೆ ಕುಕ್ಕಿಲ ಅವರು ವಕ್ಫ್ ತಿದ್ದುಪಡಿ ಕಾಯಿದೆ, ಮುಂದಿ ನಡೆಯ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮುಹಮ್ಮದ್ ಮೌಲ, ಫಾ.ವಿಲಿಯಂ ಮಾರ್ಟಿಸ್, ಸಾಲಿಡಾರಿಟಿ ಜಿಲ್ಲಾಧ್ಯಕ್ಷ ಅಫ್ವಾನ್ ಹೂಡೆ ಉಪಸ್ಥಿತರಿದ್ದರು. ಯಾಸೀನ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...