ಮನೆಗೆ ಹೋಗದೆ ಕೆಲವರು ರಾಜಿ ಮಾಡಿಕೊಂಡಿದ್ದಾರೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ

Date:

  • ‘ಬಿಜೆಪಿ ಕಾರ್ಯಕರ್ತರಿಗೆ ದ್ರೋಹ ಮಾಡುವ ಕೆಲಸ ನಾನು ಮಾಡಿಲ್ಲ’
  • ‘ಸೌಹಾರ್ದಯುತವಾಗಿ ಮನೆಗೆ ಬರುವವರನ್ನು ಬೇಡವೆನ್ನಲು ಆಗಲ್ಲ’

“ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಸೌಹಾರ್ದಯುತವಾಗಿ ಮನೆಗೆ ಬರುವವರನ್ನು ಬೇಡವೆನ್ನಲು ಆಗಲ್ಲ. ಮನೆಗೆ ಹೋಗದೆ ಕೆಲವರು ರಾಜಿ ಮಾಡಿಕೊಂಡಿದ್ದಾರೆ. ಆ ವಿಷಯ ನಾನಿಲ್ಲಿ ಮಾತನಾಡಲ್ಲ. ಬಿಜೆಪಿ ನನಗೆ ತಾಯಿ ಸಮಾನ, ಕಾರ್ಯಕರ್ತರು ಅಣ್ಣತಮ್ಮಂದಿರ ಸಮಾನ. ಬಿಜೆಪಿ ಕಾರ್ಯಕರ್ತರಿಗೆ ದ್ರೋಹ ಮಾಡುವ ಕೆಲಸವನ್ನು ಮಾಡಿಲ್ಲ” ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಭಾನುವಾರ ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, “ವಿಧಾನಸಭೆ ಚುನಾವಣೆ ಸೋಲಿಗೆ ನಾನೇ ಹೊಣೆ‌ ಹೊರುವೆ. ಪ್ರಾಮಾಣಿಕ ಕೆಲಸ ಮಾಡಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇವೆ. 5,000 ಕೋಟಿ ರೂಪಾಯಿ ಅನುದಾನದವನ್ನು ಉತ್ತರ ಕರ್ನಾಟಕ ನೀರಾವರಿಗೆ ಕೊಟ್ಟಿದ್ದೇನೆ. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯ ಘೋಷಣೆ ಮಾಡಿದ್ದೇನೆ. ನಮ್ಮ ಅಭಿವೃದ್ಧಿ ಕಾರ್ಯ ಜನರಿಗೆ ತಲುಪಿಸುವುದರಲ್ಲಿ ನಾವು ವಿಫಲ ಆಗಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ: ಸಂಸದ ರಮೇಶ್​​ ಜಿಗಜಿಣಗಿ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆಸಿದ ಸಭೆಯಲ್ಲಿ ವಿಪಕ್ಷಗಳ ನಾಯಕರು ದೇಶ ಉದ್ಧಾರ ಮಾಡುವ ಬಗ್ಗೆ ಚರ್ಚೆ ನಡೆಸಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿಗೆ ಮದುವೆ ಆಗಲ್ಲ” ಎಂದು ಲೇವಡಿ ಮಾಡಿದರು.

“ಲೋಕಸಭೆ, ವಿಧಾನಸಭೆಯೇ ಬೇರೆ ಬೇರೆ ಆಗಿದೆ. ಮಗದೊಮ್ಮೆ ಮೋದಿ ಅವರನ್ನ ಪ್ರಧಾನಿ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು. ನರೇಂದ್ರ ಮೋದಿ ಅವರು ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಗೆ ನೀರನ್ನು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದರು. ಅದರಂತೆ 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...