ಸೋಮವಾರಪೇಟೆ | ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆ

Date:

ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕು ಐಗೂರಿನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ-09-02-2026ರಂದು ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ.

ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಜಲಜಾ ಶೇಖರ್, ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಹೊರತಂದಿದ್ದು, ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ.

ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತಿಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ. ಶೈಕ್ಷಣಿಕ, ಸಾಹಿತ್ಯ ಅಲ್ಲದೆ, ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಸೋಮವಾರಪೇಟೆಯ ಅಕ್ಕನ ಬಳಗದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ‘ಅಕ್ಕ ಪಡೆ’ ಗಸ್ತು ವಾಹನಕ್ಕೆ ಚಾಲನೆ ನೀಡಿದ ಸಚಿವ ಕೆ ವೆಂಕಟೇಶ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ನಿರ್ದೇಶಕ ಸಂಜೀವ ಜೋಶಿ, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ ವಿಜೇತ್, ಗೌರವ ಕಾರ್ಯದರ್ಶಿಗಳಾದ ಎ.ಪಿ.ವೀರರಾಜು, ಕೆ.ಆರ್ ಜ್ಯೋತಿ ಅರುಣ್, ಕೋಶಾಧಿಕಾರಿ ಕೆ.ಪಿ ದಿನೇಶ್, ಮಾಜಿ ಅಧ್ಯಕ್ಷ ಜೆ.ಸಿ ಶೇಖರ್, ನಿಕಟ ಪೂರ್ವ ಅಧ್ಯಕ್ಷ ಜವರಪ್ಪ, ಐಗೂರು ಹೋಬಳಿ ಸಮಿತಿ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...