ಉಡುಪಿ | ಸೌಹಾರ್ದತೆ ಉಳಿವಿಗಾಗಿ ಮಾನಸ ಸರಪಳಿ; ಭಿತ್ತಿಪತ್ರ ಬಿಡುಗಡೆ

Date:

ದ್ವೇಷ ಭಾಷಣ, ಮತೀಯ ದ್ವೇಷ, ಅಸ್ಪೃಶ್ಯತೆ, ಜಾತೀಯ ದಮನ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಅಸಮಾನತೆಗಳ ತೀವ್ರತೆಯು ಸೌಹಾರ್ದ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶತಮಾನಗಳ ಇತಿಹಾಸವುಳ್ಳ ಕರ್ನಾಟಕದ ಸೌಹಾರ್ದ ಪರಂಪರೆ ಹಾಗೂ ಜನ ಸಂಸ್ಕೃತಿಯನ್ನು ಗುರುತಿಸಿ ಅದನ್ನು ಮುನ್ನೆಲೆಗೆ ತರುವ ಐತಿಹಾಸಿಕ ಅವಶ್ಯಕತೆ ಉಂಟಾಗಿದೆ ಎಂದು ಸೌಹಾರ್ದ ಮಾನವ ಸರಪಳಿ ಅಭಿಯಾನದ ಸಂಘಟಕ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಸಂಜೆ 4.40ಕ್ಕೆ ಉಡುಪಿಯ ಕ್ಲಾಕ್‌ ಟವರ್ ಬಳಿ ಸೌಹಾರ್ದ ಕರ್ನಾಟಕ ಸಂಘಟನೆಯು ಸೌಹಾರ್ದ ಮಾನವ ಸರಪಳಿ ಅಭಿಯಾನವನ್ನು ಆಯೋಜಿಸಿದೆ. ಅಭಿಯಾನದ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಪ್ರಸ್ತುತ ಸಮಾಜದಲ್ಲಿ ಸ್ನೇಹಪರತೆ, ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾಳಜಿಯುಳ್ಳವರೆಲ್ಲಾ ಒಂದೆಡೆ ಕಲೆತು, ಕುಳಿತು ಕಾರ್ಯಯೋಜನೆ ರೂಪಿಸಿ, ಸೌಹಾರ್ದತೆಯ ಸಂದೇಶವನ್ನು ಜನರ ನಡುವೆ ನಿರಂತರ ಕೊಂಡೊಯ್ಯುವ ಹಲವು ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯ ಹೊಣೆಗಾರರಾದ ಬಾಲಕೃಷ್ಣ ಶೆಟ್ಟಿ, ಸುಂದರ್ ಮಾಸ್ತರ್, ಪ್ರೊ.ಫಣಿರಾಜ್, ಡಾ‌.ಜೆರಾಲ್ಡ್ ಪಿಂಟೋ,ರೊನಾಲ್ಡ್, ಸಂಜೀವ್ ಬಳ್ಕೂರು, ಶಶಿಧರ್, ಕವಿರಾಜ್, ಮೋಹನ್ ಮತ್ತು ಸಂತೋಷ್ ಕರ್ವೆಲೋ, ಇದ್ರಿಸ್ ಹೂಡೆ, ಅಬ್ದುಲ್ ಅಝೀಝ್ ಉದ್ಯಾವರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...