ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ; ಸಿಎಂಗೆ ಸೌಜನ್ಯ ಕುಟುಂಬ ಒತ್ತಾಯ

Date:

ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸೌಜನ್ಯ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಬುಧವಾರ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ತಿಮರೋಡಿ ಮತ್ತು ಸೌಜನ್ಯ ಕುಟುಂಬ, “ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಮಾಯನನ್ನು ಬಂಧಿಸಿ, ಪ್ರಕರಣದ ದಿಕ್ಕು ತಪ್ಪಿಸಲಾಗಿತ್ತು. ಇದೀಗ, ಆತ ನಿರ್ದೋಷಿಯೆಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ. ಹಾಗಿದ್ದ ಮೇಲೆ, ನೈಜ ಅಪರಾಧಿಗಳನ್ನು ಬಂಧಿಸಬೇಕು. ಶಿಕ್ಷೆ ವಿಧಿಸಬೇಕು. ಅದಕ್ಕಾಗಿ, ಪ್ರಕರಣವನ್ನು ಮರು ತನಿಖೆಗೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

2012ರ ಅಕ್ಟೋಬರ್ 9ರಂದು ಉಜಿರೆಯಲ್ಲಿ ಕಾಲೇಜು ಮುಗಿಸಿ, ಧರ್ಮಸ್ಥಳದಲ್ಲಿದ್ದ ತಮ್ಮ ಮನೆಗೆ ಸೌಜನ್ಯ ತೆರಳುತ್ತಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು. ಅಕ್ಟೋಬರ್ 10ರಂದು ಆಕೆ ನಾಪತ್ತೆಯಾಗಿದ್ದ ಸ್ಥಳದಿಂದ ಕೇವಲ 20 ಮೀಟರ್ ದೂರದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಕೃತ್ಯ ಎಸಗಿದವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಹಲವಾರು ಪ್ರತಿಭಟನೆಗಳು ನಡೆದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ತುಮಕೂರು | ಹೃದಯ ವಿದ್ರಾವಕ ಘಟನೆ; ಸೂತಕದ ಮೌಢ್ಯಕ್ಕೆ ಹಸುಗೂಸು ಬಲಿ

ಪ್ರತಿಭಟನೆಯ ಕಾವು ಹೆಚ್ಚಾದಂತೆ, ಆರೋಪಿಗಳನ್ನು ಬಂಧಿಸಬೇಕಾದ ಸಂಕಷ್ಟಕ್ಕೆ ಪೊಲೀಸರು ಸಿಲುಕಿದ್ದರು. ಆಗ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಮೆಟ್ಟಿಲುಗಳ ಮೇಲೆ ಕುಳಿತಿದ್ದ ಅಮಾಯಕ ಸಂತೋಷ್‌ ರಾವ್‌ನನ್ನು ಮೂವರು ಜೈನ್‌ಗಳು ಹಿಡಿದು, ಆತನ ಆರೋಪಿಯೆಂದು ಬೊಬ್ಬೆ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದರು. ತಾನೇ ಕೃತ್ಯ ಎಸಗಿದ್ದು ಎಂದು ಒಪ್ಪಿಕೊಳ್ಳುವಂತೆ ಸಂತೋಷ್‌ಗೆ ಪೊಲೀಸರು ಹಿಂಸೆ ನೀಡಿದ್ದರು.

ಇದೀಗ, ಸಂತೋಷ್ ರಾವ್ ನಿರಪರಾಧಿಯೆಂದು ಸಿಬಿಐ ಕೋರ್ಟ್‌ ಘೋಷಿಸಿದೆ. ಈ ಬೆನ್ನಲ್ಲೇ ಸೌಜನ್ಯ ಪರ ಹೋರಾಟ ಮತ್ತೆ ಭುಗಿಲೆದ್ದಿದೆ. ರಾಜ್ಯದ್ಯಂತ ಹೋರಾಟಗಳು ನಡೆಯುತ್ತಿವೆ. ನೈಜ ಅರೋಪಿಗಳನ್ನು ಬಂಧಿಸಿ, ಶಿಕ್ಷೆಗೆ ಒಳಪಡಿಸಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...