ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್‌ಗಿರಿ ಮತ್ತೆ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೈದ ಗುಂಪಿನಲ್ಲಿದ್ದಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ ಅಬ್ದುಲ್ ಸತ್ತಾರ್ ಎಂಬವರು ತಮ್ಮ ಮಗಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಗುಂಪೊಂದು ಕಾರಿನಲ್ಲಿ ಬೆನ್ನಟ್ಟಿದೆ. ಅವರನ್ನು ಗುಂಪು ಅಡ್ಡಗಟ್ಟಿದ್ದು, ಅಬ್ದುಲ್ ಮತ್ತು ಅವರ ಮಗಳು ಬೈಕ್‌ನಿಂದ ಬಿದ್ದಿದ್ದಾರೆ. ಆಗ, ಮಗಳ ಕಾಲಿಗೆ ಗಾಯವಾಗಿದೆ. ಆದಾಗ್ಯೂ, ಗುಂಪು ಅಬ್ದುಲ್ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಹಲ್ಲೆಯಿಂದ ತಪ್ಪಿಸಿಕೊಂಡು ಅಬ್ದುಲ್ ಅವರು ಸ್ಥಳದಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಬಳಿಕ, ಅವರ ಮಗಳು ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸುಮಿತ್ ಬಂಡಾರಿ ಮತ್ತು ರಜತ್ ನಾಯ್ಕ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ಮೆರೆಯಲಾಗಿದೆ.
ಗಾಯಗೊಂಡಿದ್ದ ಅಬ್ದುಲ್ ಸತ್ತಾರ್ ಅವರ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.




