ಸೌಜನ್ಯ ಪ್ರಕರಣ | ಮರು ತನಿಖೆಗೆ ನೈಜ ಹೋರಾಟಗಾರರ ವೇದಿಕೆ ಮನವಿ

Date:

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂತೋಷ ರಾವ್ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾದರೆ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವವರು ಯಾರು? ಈ ಸತ್ಯವನ್ನು ಶೋಧನೆ ನಡೆಸಲು ಮರುತನಿಖೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕಾಗಿ ವಿಶೇಷ ತನಿಖೆ ತಂಡವನ್ನು (SIT)ರಚಿಸಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರಿಗೆ ಬೆಂಗಳೂರಿನ ʼನೈಜ ಹೋರಾಟಗಾರರ ವೇದಿಕೆʼ ಮನವಿ ಮಾಡಿದೆ.

ಮಂಗಳವಾರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮಾಹಿತಿ ಹಕ್ಕು ಕಾರ್ಯಕರ್ತ, ಹೋರಾಟಗಾರ ಎಚ್‌ ಎಂ ವೆಂಕಟೇಶ್‌, “ನಮ್ಮ ಮನವಿಗೆ ಸ್ಪಂದಿಸಿದ ಗೃಹ ಸಚಿವರು ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ಈ ದಿನಕ್ಕೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Venkatesh ೨

ಇದನ್ನು ಓದಿ ಸೌಜನ್ಯ ಪ್ರಕರಣ | ʼಗೋಲ್ಡನ್‌ ಅವರ್‌ʼ ನಲ್ಲಿ ಸಂಪೂರ್ಣ ಸಾಕ್ಷ್ಯ ನಾಶ ಮಾಡಲಾಗಿದೆ; ಸಿಬಿಐ ವರದಿ

ಸ್ಥಳೀಯ ಠಾಣಾ ಪೊಲೀಸರು, ಸಿಒಡಿ ತಂಡದವರು ಪ್ರಕರಣದ ತನಿಖೆ ನಡೆಸುವಲ್ಲಿ ಪ್ರಾಥಮಿಕ ಹಂತದಲ್ಲಿಯೇ ಕರ್ತವ್ಯಲೋಪ ಎಸಗಿದ್ದಾರೆ. ನಂತರ ತನಿಖೆ ನಡೆಸಿದ ಸಿಬಿಐ ಕೂಡಾ ಸಮಗ್ರವಾಗಿ ತನಿಖೆ ನಡೆಸಿಲ್ಲ. ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕರ್ನಾಟಕ ಪೊಲೀಸರು ಹಿಂದೆ ಹಲವು ಪ್ರಕರಣಗಳಲ್ಲಿ ಚಾಣಾಕ್ಷತನದಿಂದ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ ಉದಾಹರಣೆ ಇದೆ. ಈ ಪ್ರಕರಣದಲ್ಲಿ ಕಾಣದ ಕೈಗಳು ಕೆಲಸ ಮಾಡಿವೆ. ಪ್ರಾಥಮಿಕ ಹಂತದಲ್ಲಿಯೇ ಪ್ರಕರಣವನ್ನು ಭೇದಿಸುವಲ್ಲಿ ವಿಫಲರಾಗಿದ್ದಾರೆ. ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಅನುಮಾನವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಲ್ಲಿಕಾರ್ಜುನ್ ಮತ್ತು ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...