ಯುಗಾದಿ, ರಂಜಾನ್ ಪ್ರಯುಕ್ತ ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

Date:

ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು-ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06203 ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾರ್ಚ್‌ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಪುನಃ ಇದೇ ರೈಲು(06204) ಮಾ.29ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು, ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಲ್ಪೆ ಮಹಿಳೆ ಮೇಲೆ ಹಲ್ಲೆ; ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?

ಈ ರೈಲು 1 ಎಸಿ 2 ಟೈರ್ ಕಮ್ ಎಸಿ 3 ಟೈರ್, 3 ಎಸಿ 3 ಟೈರ್, 13 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ ಡಿ ಬೋಗಿಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ.

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...