ಬೀದರ್‌ | ಮಾನಸಿಕ, ದೈಹಿಕ ಸದೃಢಕ್ಕೆ ಕ್ರೀಡೆ ಸಹಕಾರಿ : ಶಿವಾನಂದ ಸ್ವಾಮಿ

Date:

ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಬೆಳವಣಿಗೆ ಆಗಬೇಕಾದರೆ ಕ್ರೀಡೆ ಅಗತ್ಯವಿದೆ. ಕ್ರೀಡಾಕೂಟಗಳು ಮಕ್ಕಳ ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿವೆ ಎಂದು ಹುಲಸೂರಿನ ಡಾ.ಶಿವಾನಂದ ಮಹಾಸ್ವಾಮಿ ಹೇಳಿದರು.

ಹುಲಸೂರ ಪಟ್ಟಣದ ವಿದ್ಯಾ ಜ್ಯೋತಿ ಪ್ರೌಢ ಶಾಲೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಹುಲಸೂರು ಬೇಲೂರ ಹಾಗೂ ಮಿರಖಲ್ ಕ್ಲಸ್ಟರ್ ವ್ಯಾಪ್ತಿಯ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಸಾನಿಧ್ಯ ವಹಿಸಿ ಮಾತನಾಡಿದರು.

ʼಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಬೆಳೆಯಲು ಸಾಧ್ಯವಿದೆ. ಮಕ್ಕಳ ಕ್ರೀಡಾ ಪ್ರತಿಭೆ ರಾಷ್ಟ್ರ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಮಾರ್ಗದರ್ಶನ ನೀಡಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 21 at 7.25.18 PM
ಕ್ರೀಡೆಯಲ್ಲಿ ಭಾಗವಹಿಸಿ ಜಯ ಸಾಧಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದರು.

ಹುಲಸೂರ ತಾಲೂಕು ತಹಶೀಲ್ದಾರ್ ಶಿವಾನಂದ ಮೇತ್ರೆ‌ ಕ್ರೀಡಾ ಧ್ವಜಾರೋಹಣ ನೆರೆವೇರಿಸಿ ಮಾತನಾಡಿ, ʼಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಅಗಾಧ ಪ್ರತಿಭೆಯನ್ನು ಗುರುತಿಸಲು ಶಿಕ್ಷಕರು ಶ್ರಮಿಸಬೇಕು. ಅದರಲ್ಲೂ ಕ್ರೀಡೆ ಇಂದು ಜಾಗತಿಕ ಮಟ್ಟದಲ್ಲಿ ಆಸಕ್ತಿದಾಯಕವಾಗಿದೆ. ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡಬೇಕು. ತಾಲೂಕಿನಲ್ಲಿ ಕ್ರೀಡಾ ಚಟುವಟಿಕೆ ಬೆಳವಣಿಗೆಗೆ ಅಗತ್ಯ ನೆರವು ನೀಡಲಾಗುವುದುʼ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ವೈಜಣ್ಣ ಫೂಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದನೂರ, ಎಂ.ಡಿ.ಹುಸೇನ್, ನಾಗನಾಥ ದುಬಲಗುಂಡೆ, ಶಿಕ್ಷಣ ಸಂಯೋಜಕ ಶಿವರಾಜ ಕನಕಟ್ಟೆ, ಮನೋಹರ ಕಂಟಿಕೋರೆ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಭೀಮಾಶಂಕರ ಆದೇಪ್ಪಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಕುಮಾರ ನಂದೋಡೆ, ಮಿರಖಲ್ ಸಿಆರ್‌ಪಿ ಡಾ.ಧರ್ಮೇಂದ್ರ ಭೋಸ್ಲೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ ಪತಂಗೆ, ಹುಲಸೂರ ಸಿಆರ್‌ಪಿ ಮಾರುತಿ ಬೇಂದ್ರೆ ಸೇರಿದಂತೆ ಶಿಕ್ಷಕರಾದ ಮಾಧವ ಸೂರ್ಯವಂಶಿ, ಗೀತಾ, ಮೇಬಲ್ ಹಾಗೂ ವಿವಿಧ ಶಾಲೆಯ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು. ಬೇಲೂರು ಸಿಆರ್‌ಪಿ ನಾಗರಾಜ ಹಾವಣ್ಣಾ ಸ್ವಾಗತಿಸಿ, ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...