ಗಣಿ ಬಾಧಿತ ಜನರ ಜೀವನ ಸುಧಾರಣೆಗೆ ಇರುವ ಹಣದ ದುರ್ಬಳಕೆಗೆ ಯತ್ನ; ಎಸ್‌.ಆರ್ ಹಿರೇಮಠ್ ಆರೋಪ

Date:

ಗಣಿಗಾರಿಕೆಯಿಂದ ತೊಂದರೆಗೆ ಸಿಲುಕಿದ ಜನರ ಜೀವನ ಮಟ್ಟದ ಸುಧಾರಣೆಗಾಗಿ ಮೀಸಲಿರುವ 25,000 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡುವ ಯತ್ನ ನಡೆಯುತ್ತಿದೆ ಎಂದು ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್‌) ಮುಖ್ಯಸ್ಥ ಎಸ್‌.ಆರ್‌ ಹಿರೇಮಠ ಆರೋಪಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಗಣಿಗಾರಿಕೆಯಿಂದ ಜೀವನ ಕಳೆದುಕೊಂಡ ಜನರಿಗಾಗಿ ಅಕ್ರಮ ಗಣಿಗಾರಿಕೆ ನಡೆಸಿದ ಕಂಪನಿಗಳಿಂದ ಕರ್ನಾಟಕ ಗಣಿಗಾರಿಕೆ ಪರಿಸರ ಮರುಸ್ಥಾಪನೆ ನಿಗಮ (ಕೆಎಂಇಆರ್‌ಸಿ) ಸಂಗ್ರಹಿಸಿರುವ 25 ಸಾವಿರ ಕೋಟಿ ರೂ.ಅನ್ನು ಲೂಟಿ ಹೊಡೆಯಲು ರಾಜ್ಯ ಸರ್ಕಾರದ ಮಟ್ಟದಲ್ಲೇ ಪ್ರಯತ್ನ ನಡೆಯುತ್ತಿದೆ. ಐಎಎಸ್‌ ಅಧಿಕಾರಿಗಳೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿದ್ದರು. ಇದಕ್ಕೆ, ಅವಕಾಶ ನೀಡಬಾರದು” ಎಂದು ಹೇಳಿದ್ದಾರೆ.

“ಅಧಿಕಾರಿಗಳು ರೂಪಿಸಿದ್ದ ಸಂಚಿಗೆ ಸರ್ಕಾರವೂ ಬೆಂಬಲ ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ರಚಿಸಿದ್ದ ನ್ಯಾಯಮೂರ್ತಿ ಬಿ ಸುದರ್ಶನ ರೆಡ್ಡಿ ನೇತೃತ್ವದ ಉನ್ನತಾಧಿಕಾರ ಪ್ರಾಧಿಕಾರವು ಆ ಸಂಚನ್ನು ವಿಫಲಗೊಸಿದೆ. ಆದರೆ, ಮುಂದೆ ಮತ್ತೆ ಇಂತಹ ಸಂಚುಗಳು ನಡೆಯುವ ಸಾಧ್ಯತೆಗಳಿದ್ದು, ನಿರಂತರ ಹೋರಾಟ ನಡೆಸಬೇಕಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಣಿ ಬಾಧಿತ ಪ್ರದೇಶಗಳಲ್ಲಿ ಯಾವ ರೀತಿಯ ಜನ ಕಲ್ಯಾಣ ಕಾರ್ಯಕ್ರಮ ರೂಪಿಸಬೇಕೆಂದು ಸುಪ್ರೀಂ ಕೋರ್ಟ್‌ ತನ್ನ 2024ರ ಮಾರ್ಚ್‌ 14ರ ತೀರ್ಪಿನಲ್ಲಿ ಹೇಳಿದೆ. ಕೆಎಂಇಆರ್‌ಸಿ ನಿಧಿಯನ್ನು ಆ ಉದ್ದೇಶಗಳಿಗೆ ಮಾತ್ರ ಬಳಸಬೇಕು. ಈ ನಿಧಿಯು ಗಣಿಬಾಧಿಕ ಪ್ರದೇಶಗಳ ಜನರ ಭವಿಷ್ಯಕ್ಕೆ ಸಂಬಂಧಿಸಿದ್ದು, ಒಂದೊಂದು ಪೈಸೆಗೂ ಲೆಕ್ಕ ನೀಡಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...