ಶೃಂಗೇರಿ | ಕುಡುಕನ ಅವಾಂತರ; ಬೇಸ್ತು ಬಿದ್ದ ಪೊಲೀಸರು

Date:

ಮದ್ಯವ್ಯಸನಿಯೊಬ್ಬ ಪೊಲೀಸರು ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿಯನ್ನು ಯಾಮಾರಿಸಿ ಅವಾಂತರ ಸೃಷ್ಟಿಸಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಕುಡುಕನ ಅವಾಂತರ ಕಂಡು ಪೊಲೀಸರೇ ಬೇಸ್ತು ಬಿದ್ದಿದ್ದಾರೆ.

ಹಗರಿಬೊಮ್ಮನಹಳ್ಳಿಯಿಂದ ಕೂಲಿ ಕೆಲಸಕ್ಕೆ ಎಂದು ಶೃಂಗೇರಿಗೆ ಬಂದಿದ್ದ ಬಸವರಾಜ್ ಎಂಬಾತ ಪೊಲೀಸರಿಗೆ ಕರೆ ಮಾಡಿ, ‘ಶೃಂಗೇರಿ ಬಸ್ ನಿಲ್ದಾಣದಲ್ಲಿ ಗುಂಪು ಘರ್ಷಣೆ ಆಗಿದೆ’ ಎಂದು ಹೇಳಿದ್ದಾನೆ. ಅಲ್ಲದೆ, ಆ್ಯಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿ, ‘ಗುಂಪು ಘರ್ಷಣೆಯಲ್ಲಿ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ತಕ್ಷಣ ಬನ್ನಿ’ ಎಂದು ಹೇಳಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಆ್ಯಂಬುಲೆನ್ಸ್ ಸಿಬ್ಬಂದಿ ತರಾತುರಿಯಿಂದ ಸ್ಥಳಕ್ಕೆ ಧಾವಿಸಿದ್ದಾರೆ.‌

ಮತ್ತೊಂದೆಡೆ, ಪೊಲೀಸರು ಕೂಡ ಶೃಂಗೇರಿ ಬಸ್ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ ಗುಂಪು ಘರ್ಷಣೆಯ ಯಾವುದೇ ಸುಳಿವು ಸಿಕ್ಕಿಲ್ಲ. ಬಳಿಕ ಕರೆ ಮಾಡಿ ತಿಳಿಸಿದ ವ್ಯಕ್ತಿಗೆ ಪುನಃ ಕಾಲ್ ಮಾಡಿದ್ದಾರೆ. ಪೊಲೀಸರಿಂದ ಕರೆ ಬಂದ ಕೂಡಲೇ ಮಾತನಾಡಿದ ಕುಡುಕ ಬಸವರಾಜ್, ‘ಭೂಮಿ ಮೇಲೆ ಆಕಾಶದ ಕೆಳಗಿದ್ದೇನೆ. ತಾಕತ್ತಿದ್ದರೆ ನನ್ನನ್ನು ಹುಡುಕಿ’ ಎಂದು ಸವಾಲು ಹಾಕಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಮಗಳೂರು | ಜಮೀನು ವಿವಾದ; ಎರಡು ಕುಟುಂಬಗಳ ನಡುವೆ ಮಾರಾಮಾರಿ 

ಬಸವರಾಜ್‌ ಮಾಡಿದ ಕೆಲಸಕ್ಕೆ 40 ಕಿಮೀ​ ದೂರದಿಂದ ಬಂದ ಆ್ಯಂಬುಲೆನ್ಸ್, ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂತಿರುಗಿದೆ. ಗುಂಪು ಘರ್ಷಣೆ ಆತಂಕದಲ್ಲಿ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಕಂಗಾಲಾಗಿದ್ದಾರೆ.

ಕೊನೆಗೂ ಹುಸಿ ಕರೆ ಮಾಡಿದ್ದ ಬಸವರಾಜ್‌ನನ್ನು ಪೊಲೀಸರು ಪತ್ತೆಹಚ್ಚಿ ಬುದ್ಧಿ ಹೇಳಿ ಕಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...