ಶ್ರೀನಿವಾಸಪುರ | ಸರ್ಕಾರಿ ಉರ್ದು-ಆಂಗ್ಲ ಮಾಧ್ಯಮ ಶಾಲೆಗೆ ಪುರಸಭೆ ಅಧ್ಯಕ್ಷರ ಭೇಟಿ

Date:

ಶ್ರೀನಿವಾಸಪುರ ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉರ್ದು ಹಾಗೂ ಆಂಗ್ಲ ಮಾಧ್ಯಮದ ಹಿರಿಯ ಪ್ರಾಥಮಿಕ ಶಾಲೆಗೆ ಪುರಸಭೆ ಅಧ್ಯಕ್ಷ ಭಾಸ್ಕರ್ ಅವರು ದಿಢೀರ್ ಭೇಟಿ ನೀಡಿದ್ದು, ಶಾಲೆಯ ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಪರಿಶೀಲನೆ ನಡೆಸಿದರು.

ಶಾಲೆಯ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ ಅಧ್ಯಕ್ಷರು, ಶುದ್ಧ ಕುಡಿಯುವ ನೀರಿನ ಕೊರತೆಯ ಬಗ್ಗೆ ಗಮನಹರಿಸಿ ನೂತನ ನೀರಿನ ತೊಟ್ಟಿ(ಸಂಪ್) ನಿರ್ಮಿಸಲು ಹಾಗೂ ಶಾಲೆಗೆ ಅಗತ್ಯವಿರುವ ಇತರ ಮೂಲ ಸೌಲಭ್ಯಗಳನ್ನೂ ಕೂಡ ತ್ವರಿತವಾಗಿ ಒದಗಿಸುವ ಭರವಸೆ ನೀಡಿದರು.

“ಅಡುಗೆಮನೆಯ ಪರಿಸ್ಥಿತಿ, ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನ ಭೋಜನದ ಗುಣಮಟ್ಟ ಮತ್ತು ಪಾಕವಿಧಾನದ ಬಗ್ಗೆ ನೇರವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳ ಅಭಿಪ್ರಾಯ ಆಧರಿಸಿ ಅಡುಗೆಮನೆ ಸುಧಾರಣೆಗಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶ್ರೀನಿವಾಸಪುರ 1

ಗೌನಿಪಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಬಕ್ಷುಸಾಬ್ ಮಾತನಾಡಿ, “ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸೌಲಭ್ಯಗಳು ಅತ್ಯಂತ ಅಗತ್ಯವಿದೆ. ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಶಾಲೆಯ ಅಭಿವೃದ್ಧಿ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಇಲಾಖೆಯಿಂದ ಭಿಕ್ಷಾ ಪರಿಹಾರ : ಬಡಗಲಪುರ ನಾಗೇಂದ್ರ

ಸ್ಥಳೀಯ ಸಮುದಾಯದ ಮುಖಂಡರು ಶಾಲೆಯ ಮುಂದಿನ ಬೆಳವಣಿಗೆಯ ಬಗ್ಗೆ ಹಿತಚಿಂತನೆ ವ್ಯಕ್ತಪಡಿಸಿ, ಉತ್ತಮ ಶೈಕ್ಷಣಿಕ ಪರಿಸರ ನಿರ್ಮಾಣಕ್ಕೆ ಸಕ್ರಿಯ ಸಹಕಾರ ನೀಡುವಂತೆ ಒತ್ತಾಯಿಸಿದರು.

ಸಭೆಯಲ್ಲಿ ಪುರಸಭೆ ಸದಸ್ಯೆ ಸಂಜೆಯ ಸಿಂಗ್, ಗೌನಿಪಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯ ಖಾದರ್ ಬಾಷಾ, ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್, ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಸಾಧಿಕ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯತ್ ಉಲ್ಲಾ ಖಾನ್, ಡಾ ಎ ಪಿ ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷ ಅಲಿಯಾಸ್ ಪಾಷ, ಕಾರ್ಯದರ್ಶಿ ಎಚ್ ಅಕ್ರಂ ಪಾಷ, ಇಮ್ತಿಯಾಸ್ ಪಾಷ, ಸೈಯದ್ ಅಮ್ಜದ್ ಪಾಷಾ, ರಫೀಕ್ ಅಹ್ಮದ್, ನಾಗೇಶ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...