ಶ್ರೀನಿವಾಸಪುರ | ಬಲಾಢ್ಯರಿಂದ ನಿರಂತರ ಕಿರುಕುಳ: ದಯಾಮರಣಕ್ಕೆ ಅರ್ಜಿ ಹಾಕಿದ ದಲಿತ ಕುಟುಂಬ!

Date:

ಬಲಾಢ್ಯ ಜಾತಿಯವರ ನಿರಂತರ ಕಿರುಕುಳಕ್ಕೆ ಬೇಸತ್ತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಲಿತ ಕುಟುಂಬವೊಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿರುವ ಸಂಗತಿ ಬೆಳಕಿಗೆ ಬಂದಿದೆ.

“ಕೆಳ ವರ್ಗಕ್ಕೆ ಸೇರಿದ ಕಾರಣ ನನ್ನ ಕುಟುಂಬದ ಮೇಲೆ ಮೇಲ್ಜಾತಿಯವರು ತುಂಬಾ ದೌರ್ಜನ್ಯ ನಡೆಸುತ್ತಿದ್ದಾರೆ. ಬೇಸತ್ತು ಹೋಗಿದ್ದೇನೆ. ಹಾಗಾಗಿ, ನನಗೆ ಹಾಗೂ ನನ್ನ ಕುಟುಂಬದವರಿಗೆ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ರಾಷ್ಟ್ರಪತಿಗೆ ಪತ್ರದ ಮೂಲಕ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡಿನ ಬಿಸನಪಲ್ಲಿ ಗ್ರಾಮದ ದಲಿತ ನಿವಾಸಿ ನರಸಿಂಹಪ್ಪ ಕೋರಿದ್ದಾರೆ.

“ನಾನು ಮದುವೆಯಾದ ನಂತರ ನನ್ನ ಹೆಂಡತಿಗೆ ಯಾರ ಮನೆಯಲ್ಲೂ ಕೆಲಸಕ್ಕೆ ಕಳಿಸದೆ ಮಕ್ಕಳನ್ನು ಚೆನ್ನಾಗಿ ಪೋಷಣೆ ಮಾಡಿ ಒಳ್ಳೆಯ ವಿದ್ಯಾಭ್ಯಾಸ ಕೊಡಿಸುವ ಪ್ರಯತ್ನ ಮಾಡಿದೆ. ಆದರೆ ಇದನ್ನು ಸಹಿಸದ ಗ್ರಾಮದ ನಿವಾಸಿಗಳಾದ ರಾಜಾರೆಡ್ಡಿ, ಪೆಂಕಟರಾಮಣ್ಣ, ರಾಮಲಕ್ಷ್ಮಮ್ಮ, ಸುರೇಂದ್ರ ರೆಡ್ಡಿ ಇವರು ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002177121 1

“ನನಗೆ ಸೇರಿದ ಜೇನು, ಶ್ರಿಗಂಧ, ಮಾವು, ಇತ್ಯಾದಿ ಕೃಷಿ ಬೆಳೆಗಳಿಗೆ ಬೆಂಕಿ ಹಚ್ಚಿ ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ನನ್ನ ಮನೆಗೆ ಬರುತ್ತಿದ್ದ ನೀರಿನ ಸಂಪರ್ಕವನ್ನು ಕಡಿತಮಾಡಿ ಕೊಳಚೆ ನೀರನ್ನು ಬಿಟ್ಟಿದ್ದಾರೆ ಹಾಗೂ ಮನೆಯ ಹೊರಗೆ ಕೊಳಚೆ ನೀರು ನಿಲ್ಲುವಂತೆ ಮಾಡಿ ಬಗೆಬಗೆಯ ತೊಂದರೆಗಳನ್ನು ನಮಗೆ ನೀಡುತ್ತಿದ್ದಾರೆ ಎಂದು ದಯಾ ಮರಣ ಅರ್ಜಿಯಲ್ಲಿ ವಿವರಗಳನ್ನು ನೀಡಿದ್ದಾರೆ.

ಒಂದು ದಿನ ರಾಜಿ ಮಾಡಕ್ಕೆ ನನಗೆ ಕರೆದು ಮತ್ತೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ‌ ನಾನು ಬೆಂಗಳೂರಿಗೆ ಹೋಗಿದ್ದ ಸಮಯ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು ಹಾಗೂ ರೇಪ್ ಮಾಡಲು ಸಹ ಪ್ರಯತ್ನ ಪಟ್ಟರು ಎಂದು ನರಸಿಂಹಯ್ಯ ಈ ದಿನ ಡಾಟ್ ಕಾಮ್ ಜೊತೆಗೆ ಮಾತನಾಡುತ್ತಾ ತಮ್ಮ ನೋವನ್ನು ತಿಳಿಸಿದ್ದಾರೆ.

1002177166

ನಾನು ರಾಜ್ಯದ ಮುಖ್ಯಮಂತ್ರಿಗಳಿಗೆ, ಡಿ.ಜಿ, ಜಿಲ್ಲಾಧಿಕಾರಿಗೆ, ಪೋಲಿಸ್ ಇಲಾಖೆ ನನಗೆ ರಕ್ಷಣೆ ನೀಡಬೇಕು ಎಂದು ಮನವಿ ಸಹ ಸಲ್ಲಿಸಿದ್ದೇನೆ‌.‌ ಯಾರೂ ಕೂಡ ಸಕಾರಾತ್ಮಕವಾಗಿ ಸ್ಪಂದನೆ ಮಾಡಿಲ್ಲ. ನಾನು ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದು, ಜಾತಿ ನಿಂದನೆ ದೂರು ಹಿಂಪಡೆಯಿರಿ ಎಂದು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ಮನೆ ಬಿಟ್ಟು ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

“ನಮ್ಮ ಮೇಲೆ ಇಷ್ಟು ದೌರ್ಜನ್ಯ ನಡೆಯುತ್ತಿದ್ದರು ಸರಿಯಾದ ರೀತಿಯಲ್ಲಿ ರಕ್ಷಣೆ ಸಿಗದ ಹಿನ್ನೆಲೆಯಲ್ಲಿ ಬೇಸತ್ತು ದಯಾ ಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದೇವೆ” ಎಂದು ನರಸಿಂಹಯ್ಯ ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...