ಶ್ರೀರಂಗಪಟ್ಟಣ | ಪ್ರತಿ ಸಮಸ್ಯೆಗೂ ರೈತರು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ: ಕೆಂಪೂಗೌಡ

Date:

ಅತೀ ಶೀಘ್ರದಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆಗೆಯಬೇಕು. ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೈತರು ಪ್ರತಿ ಸಮಸ್ಯೆಗೂ ಹೋರಾಟ ಮಾಡಿಯೇ ಪರಿಹಾರ ಪಡೆಯಬೇಕಾದ ಅನಿವಾರ್ಯತೆ ಬಂದಿದೆ. ಇನ್ನೂ ಎಷ್ಟು ದಿನ ಹೀಗೆಯೇ ನಡೆಯಬೇಕು ಎಂದು ಕೆಂಪೂಗೌಡ ಆಕ್ರೋಶ ವ್ಯಕ್ತಪಡಿಸಿದರು.

ಅವರು  ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘವು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಪ್ರತಿಭಟನೆಯಲ್ಲಿ ರೈತರು, ಕೃಷಿಕಾರ್ಮಿಕರು, ದಸಂಸ ಮುಖಂಡರು, ಕನ್ನಡಪರ ಸಂಘಟನೆಗಳು ಹಾಗೂ ಎಲ್ಲಾ ಪ್ರಗತಿಪರ ಸಂಘಟನೆಗಳು ಭಾಗವಹಿಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2024 11 19 22 53 20 24 6012fa4d4ddec268fc5c7112cbb265e7

ನಮ್ಮನ್ನು ಆಳುವ ಸರ್ಕಾರಗಳು ರೈತರ ಹಿತ ಕಾಪಾಡುವ ಬರವಸೆ ನೀಡಿ ಮತಗಳಿಸಿ ಅಧಿಕಾರಕ್ಕೆ ಬಂದ ನಂತರ ರೈತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ರೈತರು ಬೆಲೆ ಏರಿಕೆ, ಗೊಬ್ಬರದ ದರ ಏರಿಕೆ, ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಸಾಲದ ಸುಳಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ರೈತರು ವ್ಯವಸಾಯದಿಂದ ದೂರ ಉಳಿಯುತ್ತಿದ್ದಾರೆ. ಇದೆಲ್ಲವನ್ನು ಸಹಿಸಿಕೊಂಡು ಸುಮ್ಮನಿದ್ದರೆ ರೈತರ ಹಾಗೂ ಹಳ್ಳಿಗಾಡಿನ ಜನಜೀವನ ಸಂಪೂರ್ಣ ನಾಶವಾಗುವ ಕಾಲ ಬಹಳ ದೂರವಿಲ್ಲ. ಈಗ ರೈತರು ಹಾಗೂ ಕೃಷಿಕಾರ್ಮಿಕರು ಪಕ್ಷ ಬೇಧ ಮರೆತು ಸಂಘಟಿತರಾಗಿ ಹೋರಾಟ ಮಾಡಲೇ ಬೇಕಾಗಿದೆ ಎಂದರು.

ನಂತರ ತಾಲೂಕು ಅಧಿಕಾರಿಗಳಿಗೆ ರೈತರು ಈ ಕೆಳಗಿನ ಹಕ್ಕೊತ್ತಾಯಗಳನ್ನು ಸಲ್ಲಿಸಿದರು. ಅತೀ ಶೀಘ್ರದಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆರೆಯುವುದು. ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹಧನ ಬಿಡುಗಡೆ ಮಾಡುವುದು. ರೈತ ಪಹಣಿಯಲ್ಲಿ ನಮೂದಿಸಲಾಗಿರುವ ವಕ್ಫ್‌ ಹೆಸರನ್ನು ತೆಗೆದು ಹಾಕುವುದು, ರೈತರಿಗೆ ಸರಬರಾಜು ಮಾಡುತ್ತಿರುವ ವಿದ್ಯುತನ್ನು ಹಗಲು ವೇಳೆಯಲ್ಲಿ 10 ಗಂಟೆಗಳ ಕಾಲ ಸರಬರಾಜು ಮಾಡಲು ಕ್ರಮ ವಹಿಸುವುದು. ಹೊಸದಾಗಿ ಕೊಳವೆ ಬಾವಿ ಕೊರೆಸುವ ರೈತರಿಗೆ ವಿದ್ಯುತ್ ಸರಬರಾಜು ಮಾಡಲು ಹಿಂದೆ ಇದ್ದ ರೀತಿಯಲ್ಲಿ ಮುಂದುವರೆಸುವುದು. ಸರ್ಕಾರಿ ಜಮೀನು ಮತ್ತು ಅರಣ್ಯ ಭೂಮಿಯನ್ನು ಖಾಸಗಿಯವರು ಒತ್ತುವರಿ ಮಾಡುತ್ತಿದ್ದು ಸರ್ಕಾರ ಕೂಡಲೇ ಇದನ್ನು ತಡೆಗಟ್ಟಬೇಕು. ಸರ್ವೆ ನಂಬರ್ 15 ರಲ್ಲಿ ನಾಗರಘಟ್ಟ ಗ್ರಾಮದಲ್ಲಿ ರಸ್ತೆ ಸೇರಿಸಿ ದುರಸ್ತಿ ಮಾಡಿರುವುದನ್ನು ಕೂಡಲೇ ರದ್ದುಪಡಿಸಿ ರೈತರಿಗೆ ತಿರುಗಾಡಲು ಎಂದಿನಂತೆ ರಸ್ತೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಕಳೆದ ಸಾಲಿನಲ್ಲಿ ಸರಬರಾಜು ಮಾಡಿದ ಕಬ್ಬಿಗೆ ನೀಡಬೇಕಾದ ರೂ.150 ಬಾಕಿಯನ್ನು ಕೂಡಲೇ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳುವುದು, ಸರ್ಕಾರಿ ಕಚೇರಿಗಳಲ್ಲಿ ರೈತರು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿದ್ದು, ಈ ಬಗ್ಗೆ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

ಈ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷರಾದ ಶಂಭುಗೌಡ, ಕಾರ್ಯದರ್ಶಿ ಕೇಶವ್, ಪಾಲಹಳ್ಳಿ ರಾಮೇಗೌಡ, ಪಾಂಡು, ಜಯರಾಮೇಗೌಡ, ಕಡತನಾಳು ಬಾಲಕೃಷ್ಣ, ಸ್ವಾಮಿಗೌಡ, ಮರಳಗಾಲ ಕೃಷ್ಣೇಗೌಡ, ಪಾಂಡವಪುರ ತಾಲ್ಲೂಕು ಅಧ್ಯಕ್ಷರಾದ ಕೆನ್ನಾಳು ನಾಗರಾಜು, ಕೆನ್ನಾಳು ವಿಜಯ್ ಕುಮಾರ್, ರಘು ಎಣ್ಣೆಹೊಳೆ, ಪ್ರಿಯಾ ರಮೇಶ್ ಸೇರಿದಂತೆ ಶ್ರೀರಂಗಪಟ್ಟಣ ತಾಲೂಕು ರೈತ ಸಂಘದ ಕಾರ್ಯಕರ್ತರು‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...