ಶ್ರೀರಂಗಪಟ್ಟಣ | ಹಿಂದುತ್ವ ಕೋಮು ಕಾರ್ಯಕರ್ತರಿಂದ ಮಸೀದಿಗೆ ನುಗ್ಗಲು ಯತ್ನ

Date:

ಮಂಡ್ಯ ಜಿಲ್ಲೆಯ ಶೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ವಿವಾದ ತಾಣವಾಗಿಸಲು ಕಳೆದ ಎರಡು/ಮೂರು ವರ್ಷಗಳಿಂದ ಸಂಘಪರಿವಾರ ಯತ್ನಿಸುತ್ತಿದೆ. ನಿರಂತರವಾಗಿ ಮಸೀದಿ ವಿಚಾರದಲ್ಲಿ ಗದ್ದಲಗಳನ್ನು ಸೃಷ್ಟಿಸುತ್ತಿದೆ. ಬುಧವಾರ, ಹನುಮ ಮಾಲೆ ಧರಿಸಿದ್ದ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಮಸೀದಿಗೆ ನುಗ್ಗಲು ಯತ್ನಿಸಿದ್ದು, ಅವರನ್ನು ಪೊಲೀಸರು ತಡೆದಿದ್ದಾರೆ.

ಹನುಮ ಜಯಂತಿ ಆಚರಣೆಗಾಗಿ ಸಂಘಪರಿವಾರವು ಶ್ರೀರಂಗಪಟ್ಟಣದಲ್ಲಿ ಬುಧವಾರ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯನ್ನು ಆಯೋಜಿಸಿತ್ತು. ಜಾಮಿಯಾ ಮಸೀದಿಯನ್ನು ಗುರಿಯಾಗಿಸಿಕೊಂಡೇ ಸಂಘಪರಿವಾರವು ಸಂಕೀರ್ತನಾ ಯಾತ್ರೆಯನ್ನು ನಡೆಸುತ್ತಾ ಬಂದಿದೆ. ಕೇಸರಿ ಮಾಲಾಧಾರಿಗಳು ಗದ್ದಲ ಸೃಷ್ಟಿಸುತ್ತಾರೆ ಎಂಬುದನ್ನು ಅಂದಾಜಿಸಿದ್ದ ಜಿಲ್ಲಾಡಳಿತವು ಸ್ಥಳದಲ್ಲಿ ಪೊಲೀಸ್‌ ಬಂದೋಬಸ್ತ್ ಮಾಡಿತ್ತು. ಆದರೂ, ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಲು ಯತ್ನಿಸಿದ್ದಾರೆ. ಪರಿಣಾಮ, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಮಸೀದಿಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ, ಸಂಘಪರಿವಾರದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿಕ ಚಕಮಕಿ ನಡೆದಿದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರು ಭದ್ರತೆಯ ನೇತೃತ್ವವಹಿಸಿದ್ದರು. ಸುಮಾರು 1,800 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಭದ್ರತೆ ನಿಯೋಜಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...