ಶ್ರೀರಂಗಪಟ್ಟಣ | ಉಪನೋಂದಣಿ ಕಚೇರಿಯ ಖಾಸಗಿ ನೌಕರರ ಕಾರುಬಾರಿಗೆ ಲಗಾಮು ಹಾಕಿ: ರೈತ ಮುಖಂಡ ಕಿರಂಗೂರು ಪಾಪು

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಖಾಸಗಿ ನೌಕರರ ಕಾರುಬಾರು ಹೆಚ್ಚಾಗಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಲಗಾಮು ಹಾಕಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋಟ್ಯಂತರ ರೂ.ರಿಜಿಸ್ಟ್ರರ್, ಕ್ರಯ, ಭೋಗ್ಯ ವಗೈರೆ, ಅಮೂಲ್ಯವಾದ ಹಳೆ ಕ್ರಯಪತ್ರಗಳಿಂದ ಹಾಗೂ ಇ.ಸಿ., ಮಾಡ್‌ಗೇಜ್ ಮಾಡಿಸಲು ದಿನನಿತ್ಯ ರೈತರು, ಸಾರ್ವಜನಿಕರಿಂದ ಗಿಜಿಗುಟ್ಟುವ ಶ್ರೀರಂಗಪಟ್ಟಣ ಉಪನೋಂದಣಾ ಕಛೇರಿಯಲ್ಲಿ ಸರ್ಕಾರಿ ನೌಕರರಾಗಿ 2-3 ಜನ ಮಾತ್ರ ಕರ್ತವ್ಯನಿರ್ವಹಿಸುತ್ತಿದ್ದಾರೆ. ಕಚೇರಿಯಲ್ಲಿ ಖಾಸಗಿ ನೌಕರರೇ ತುಂಬಿತುಳುಕುತ್ತಿದ್ದಾರೆ. ಅವರದ್ದೇ ಕಾರುಬಾರಾಗಿದೆ. ಇವರಿಂದ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದ್ದಾರೆ.

ಖಾಸಗಿಯವರನ್ನು ನೇಮಕಾತಿ ಮಾಡಲು ಆದೇಶ ಕೊಟ್ಟಿರುವವರು ಯಾರು? ಇವರಿಗೆ ಯಾರು ಸಂಬಳ ನೀಡುತ್ತಾರೆ ಎಂಬುದನ್ನು ಉಪನೋಂದಾಣಾಧಿಕಾರಿಗಳು ಬಹಿರಂಗಪಡಿಸಬೇಕು ಎಂದು ಕಿರಂಗೂರು ಪಾಪು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಇನ್ನೂ ಮರೀಚಿಕೆಯಾಗಿವೆ. ಉಪನೋಂದಾಣಾಧಿಕಾರಿ ಮಂಜುದರ್ಶಿನಿ ಜಿ. ಇವರು ರೈತರ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಸೌಜನ್ಯ ತೋರುತ್ತಿಲ್ಲ. ಅವರನ್ನು ನಿಂತುಕೊಂಡೇ ಮಾತನಾಡಿಸುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಖಾಸಗಿ ನೌಕರರು ಅಲ್ಲಿ ಬಾಸ್‌ಗಳಂತೆ ವರ್ತಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

Srirangapattana 1

ಕಚೇರಿಯಲ್ಲಿ ಸೂಕ್ತ ಭದ್ರತೆ ಇಲ್ಲ. ಕೋಟ್ಯಾಂತರ ರೂ.ಗಳ ಸರ್ಕಾರಿ ವಹಿವಾಟು ನಡೆಯುವ ಸ್ಥಳದಲ್ಲಿ ಒಂದು ಸಿ.ಸಿ.ಕ್ಯಾಮರಾ ಇಲ್ಲ. ಕಡತಗಳಿಗೆ ಸರ್ಕಾರಿ ನೌಕರರಿಂದ ಭದ್ರತೆ ವ್ಯವಸ್ಥೆ ಇಲ್ಲ. ಮೂಲ್ಯವಾದ ದಾಖಲೆಗಳನ್ನು ಖಾಸಗಿ ನೌಕರರ ಕೈಗೆ ಕೊಟ್ಟುಬಿಟ್ಟಿದ್ದಾರೆ. ಇವರು ರಿಯಲ್ ಎಸ್ಟೇಟ್ ಉದ್ಯಮಿಗಳು, ರಾಜಕಾರಣಿಗಳು, ಅವರ ಹಿತ ಕಾಯುವವರಿಗೆ ಕೂಡಲೇ ಬೇಕಾದ ದಾಖಲೆಗಳನ್ನು ಕ್ಷಣಮಾತ್ರದಲ್ಲೆ ನೀಡುತ್ತಾರೆ. ಬಡರೈತರು, ಸಾರ್ವಜನಿಕರು ಅರ್ಜಿ ಕೊಟ್ಟರೆ, ಮಾಹಿತಿ ಕೇಳಿದರೆ ಅವರಿಗೆ ಒಂದಲ್ಲಾ ಒಂದು ಸಬೂಬು ಹೇಳಿ ಸಾಗ ಹಾಕುವ ಕೆಲಸವನ್ನು ದಿನನಿತ್ಯವೂ ಮಾಡುತ್ತಾ ಬರುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿದ್ದೀರಾ? ಕ್ಷೌರ ಮಾಡಲು ನಿರಾಕರಿಸಿದ ಮುದುಕಪ್ಪ ಹಡಪದ್ ಆಸ್ತಿ ಮುಟ್ಟುಗೋಲು ಹಾಕಬೇಕು : ಮಾದಿಗ ಸಮುದಾಯ ಒತ್ತಾಯ

ಯಾವ ಯಾವ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಾರೆ ಎಂಬ ಬಗ್ಗೆ ಫಲಕಗಳಿಲ್ಲ. ಖಾಸಗಿ ನೌಕರರು ಯಾರು? ಸರ್ಕಾರಿ ನೌಕರರು ಯಾರು ಎಂಬುದೇ ಗೊತ್ತಾಗುವುದಿಲ್ಲ. ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದೆ. ಇ.ಸಿ. ಹಾಗೂ ಹಳೆ ನೋಂದಣಿ ಕ್ರಯಪತ್ರಗಳು ನೀಡುವ ಸ್ಥಳದಲ್ಲಿ ಲಂಗುಲಗಾಮಿಲ್ಲದೆ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ತಾಲೂಕು ಉಪನೋಂದಣಾಧಿಕಾರಿಗಳು ಸುಮಾರು ವರ್ಷಗಳಿಂದಲೂ ಇಲ್ಲಿಯೇ ಜಂಡಾ ಹೂಡಿದ್ದಾರೆ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕಂದಾಯ ಸಚಿವರನ್ನು ರೈತ ಮುಖಂಡ ಒತ್ತಾಯಿಸಿದ್ದಾರೆ.

ಕಚೇರಿಗೆ ಅಗತ್ಯವಿರುವ ಸರ್ಕಾರಿ ನೌಕರರನ್ನು ಮಾತ್ರ ಕೂಡಲೇ ನೇಮಕ ಮಾಡಬೇಕು. ಕಚೇರಿಗೆ ಮೂಲಭೂತ ಸೌಕರ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಪನೋಂದಣಾಧಿಕಾರಿಯವರಿಗೂ ಗಮನಕ್ಕೆ ತರಲಾಗಿದೆ. ಕೂಡಲೇ ಕಂದಾಯ ಮಂತ್ರಿ ಕೃಷ್ಣಭೈರೇಗೌಡರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...