ಉಡುಪಿ | ವಿದ್ಯಾರ್ಥಿಗಳಿಗೆ ಬಸ್ ಅವ್ಯವಸ್ಥೆ ಸರಿಪಡಿಸಿ : ಎಸ್ ಎಫ್ ಐ ಆಗ್ರಹ

Date:

ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮಾರ್ಗಗಳಲ್ಲಿ ಶಾಲಾ ಕಾಲೇಜು ಸಮಯಗಳಲ್ಲಿ ಸಂಚರಿಸುತ್ತಿರುವ ಬಸ್ ಗಳಲ್ಲಿ ಜನರನ್ನು ವಿಪರೀತವಾಗಿ ಕಾನೂನು ಬಾಹಿರವಾಗಿ ತುಂಬಿಸಿಕೊಂಡು ಸಂಚರಿಸುತ್ತಿದ್ದು ಅಪಾಯಕಾರಿ ಸನ್ನಿವೇಶವಾಗಿದೆ.

ಈ ಸಮಯದಲ್ಲಿ ಸಂಚರಿಸುತ್ತಿರುವ ಖಾಸಗಿ ಬಸ್ಸುಗಳು ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿದ್ದಾರೆ ಎಲ್ಲರೂ ಬಸ್ ಏರಿದ ಮೇಲೆ ವಿದ್ಯಾರ್ಥಿಗಳನ್ನು ಬಸ್ ಹತ್ತುವಂತೆ ಬೆದರಿಕೆ ಹಾಕಲಾಗುತ್ತಿದೆ ಇದರಲ್ಲಿ ಬಹು ದೂರದ ವರೆಗೆ ಸಾಗುವ ಮುಟ್ಟಾದ ಸಂದರ್ಭದ ವಿದ್ಯಾರ್ಥಿನಿಯರ ಪಾಡು ಕಷ್ಟದಾಯಕ ಆಗಿದೆ.ಪುಟ್ ಬೋರ್ಡ್ ಮೇಲೆ ನಿಂತು ಪ್ರಾಣ ಭಯ ಎದುರಿಸುತ್ತಿದ್ದಾರೆ.

ಈ ಸಮಸ್ಯೆಯು ಜಿಲ್ಲಾಡಳಿತ ಹಾಗೂ ಸಾರಿಗೆ ಪ್ರಾಧೀಕಾರದ ಗಮನದಲ್ಲಿದ್ದರೂ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪರ್ಯಾಯ ವ್ಯವಸ್ಥೆ ಮಾಡದೇ ಕಣ್ಣು ಮುಚ್ಚಿ ಕುಳಿತಿರುವುದು ಖಂಡನೀಯವಾಗಿದೆ.ಕೂಡಲೇ ಜಿಲ್ಲಾಡಳಿತ ಸಮಸ್ಯೆಯನ್ನು ಪರಿಹರಿಸಲು ಗ್ರಾಮೀಣ ಪ್ರದೇಶದ ಎಲ್ಲಾ ಮಾರ್ಗಗಳಿಗೂ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಕ್ರಮ ವಹಿಸಬೇಕು ಎಲ್ಲಾ ಮಾರ್ಗಗಳನ್ನು ರಾಷ್ಟ್ರೀಕರಣ ಮಾಡಬೇಕು.
ಸರಕಾರದ ಶಕ್ತಿ ಯೋಜನೆಯಿಂದ ವಿದ್ಯಾರ್ಥಿನಿಯರನ್ನು ವಂಚಿಸಿರುವ ಜಿಲ್ಲಾಡಳಿತ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಾಯ ಮಾಡಲು ಮುಂದಾಗಬೇಕು ಇಲ್ಲವಾದರೆ ವಿದ್ಯಾರ್ಥಿಗಳು ಮುಂದಿನ ಹೋರಾಟ ರೂಪಿಸಲು ನಿರ್ಧರಿಸಲಾಗುತ್ತದೆ ಎಂದು ಎಸ್ ಎಫ್ ಐ ರಾಜ್ಯ ಸಮಿತಿ ಸದಸ್ಯ ರಿತಿಕಾ ಹಾಗೂ ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ಕಾರ್ತಿಕ್ ಉಡುಪಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...