ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ

Date:

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಗಳಿಸಿದ್ದ ಬೀದರ್‌ ಜಿಲ್ಲೆಯ ಭಾಲ್ಕಿಯ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ, ಪತ್ರಿಕೆಯ ಮರು ಮೌಲ್ಯಮಾಪನದ ಬಳಿಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ.

ದೇವಿ ಮೊದಲು ಶೇ 99.36 ರಷ್ಟು ಅಂಕ ಗಳಿಸಿದ್ದರು. ಅವರಿಗೆ ಹಿಂದಿ ವಿಷಯದಲ್ಲಿ 98 ಅಂಕಗಳು ಬಂದಿದ್ದವು. ಆದರೆ, ಇದರಿಂದ ತೃಪ್ತರಾಗದ ಅವರು ಹಿಂದಿ ವಿಷಯದ ಮರು ಮೌಲ್ಯಮಾಪನಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಮರು ಮೌಲ್ಯಮಾಪನದ ನಂತರ ಅವರಿಗೆ ಎರಡು ಅಂಕ ಹೆಚ್ಚಾಗಿ ಹಿಂದಿಯಲ್ಲಿ 100ಕ್ಕೆ 100 ಅಂಕ ಬಂದಿವೆ. ಈಗ ವಿದ್ಯಾರ್ಥಿನಿಯ ಒಟ್ಟಾರೆ ಫಲಿತಾಂಶ ಶೇ 99.68ಕ್ಕೆ ಏರಿಕೆಯಾಗಿದ್ದು, ರ‍್ಯಾಂಕ್‌ನಲ್ಲೂ ಎರಡು ಸ್ಥಾನ ಜಿಗಿತ ಕಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ದೇವಿ 625 ಅಂಕಗಳ ಪೈಕಿ 623 ಅಂಕ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ. ಶಾಲೆ ಫಲಿತಾಂಶದಲ್ಲಿ ಸತತ ಎರಡನೇ ವರ್ಷವೂ ಕಲಬುರಗಿ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಶಾಲೆಯ ಅಧ್ಯಕ್ಷ ಸಂತೋಷ ಖಂಡ್ರೆ ತಿಳಿಸಿದ್ದಾರೆ.

ವಿದ್ಯಾರ್ಥಿ ಸಾಧನೆಗೆ ಶಾಲೆಯ ಕಾರ್ಯದರ್ಶಿ ಉಷಾ ಖಂಡ್ರೆ, ಪ್ರಾಚಾರ್ಯ ಅನಿಲ್ ಪಾಟೀಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...