ಎಸ್‌ಎಸ್‌ಎಲ್‌ಸಿ ಫಲಿತಾಂಶ | ದಾವಣಗೆರೆಗೆ 21ನೇ ಸ್ಥಾನ; ಬಾಲಕಿಯರದ್ದೇ ಮೇಲುಗೈ

Date:

ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ. ಜಿಲ್ಲೆಗೆ ಯಾವುದೇ ರ್ಯಾಂಕ್ ದೊರೆಯದಿರುವುದು ಶಿಕ್ಷಣ ಪ್ರೇಮಿಗಳಲ್ಲಿ ನಿರಾಸೆ ಮೂಡಿಸಿದೆ.

ದಾವಣಗೆರೆ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದ 19,970 ವಿದ್ಯಾರ್ಥಿಗಳಲ್ಲಿ 13196 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 7,925 ಮಂದಿ ಬಾಲಕಿಯರು 5,271 ಮಂದಿ ಬಾಲಕರು ತೇರ್ಗಡೆ ಹೊಂದಿದ್ದಾರೆ.

ದಾವಣಗೆರೆ ನಗರದ ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಯಶಸ್ವಿನಿ ಕೆ ಪಿ 623 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದು, ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿನಿ ಐಜಾ ಫಾತಿಮಾ 622 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಿದ್ದಗಂಗಾ ಶಾಲೆಯ ಯಶಸ್ವಿನಿ ಈಡಿಗೇರ 625ಕ್ಕೆ 622, ಕೀರ್ತಿ 622, ಸುಶ್ಮಿತಾ 622 ಅಂಕ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದಾವಣಗೆರೆ ಉರ್ದು ಶಾಲೆ ವಿದ್ಯಾರ್ಥಿನಿ

ಚನ್ನಗಿರಿ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ 3,464 ವಿದ್ಯಾರ್ಥಿಗಳಲ್ಲಿ 916 ಮಂದಿ ಬಾಲಕರು, 1,449 ಮಂದಿ ಬಾಲಕಿಯರು ಸೇರಿದಂತೆ 2,365 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.68.27 ಫಲಿತಾಂಶ ಲಭಿಸಿದೆ. ದಾವಣಗೆರೆ ದಕ್ಷಿಣ ತಾಲೂಕಿನಲ್ಲಿ 5182 ವಿದ್ಯಾರ್ಥಿಗಳಲ್ಲಿ 1510 ಬಾಲಕರು, 2118 ಬಾಲಕಿಯರು ಸೇರಿ 3628 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.70.01 ಫಲಿತಾಂಶ ಪಡೆದಿದೆ.‌ ದಾವಣಗೆರೆ ಉತ್ತರ ತಾಲೂಕಿನಲ್ಲಿ 3370‌ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 884 ಬಾಲಕರು, 1195 ಬಾಲಕಿಯರು ಸೇರಿ 2079 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.61.79 ಫಲಿತಾಂಶ ದೊರೆತಿದೆ. ಹರಿಹರ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 3009 ವಿದ್ಯಾರ್ಥಿಗಳ ಪೈಕಿ 701 ಬಾಲಕರು, 1128 ಬಾಲಕಿಯರು ಒಳಗೊಂಡು 1829 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.60.78 ಫಲಿತಾಂಶ ಪಡೆದು ಜಿಲ್ಲೆಯಲ್ಲಿ ಕೊನೆ ಸ್ಥಾನದಲ್ಲಿದೆ.

ಹೊನ್ನಾಳಿಯಲ್ಲಿ ಪರೀಕ್ಷೆಗೆ ಹಾಜರಾದ 2706 ವಿದ್ಯಾರ್ಥಿಗಳಲ್ಲಿ 691 ಬಾಲಕರು, 1156 ಬಾಲಕಿಯರು ಸೇರಿದಂತೆ ಒಟ್ಟು 1847 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಒಟ್ಟು ಶೇ.68.26 ಫಲಿತಾಂಶ ಸಿಕ್ಕಿದೆ. ಜಗಳೂರು ತಾಲೂಕಿನ ಪರೀಕ್ಷೆಗೆ ಹಾಜರಾದ 2239 ವಿದ್ಯಾರ್ಥಿಗಳ ಪೈಕಿ 569 ಬಾಲಕರು, 879 ಬಾಲಕಿಯರು ಸೇರಿ 1448 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.64.67 ಫಲಿತಾಂಶ ಲಭಿಸಿದೆ. ಒಟ್ಟಾರೆ ಜಿಲ್ಲೆಯಲ್ಲಿ ದಾವಣಗೆರೆ ದಕ್ಷಿಣ ತಾಲೂಕು ಮೊದಲ ಸ್ಥಾನದಲ್ಲಿದೆ.‌

ದಾವಣಗೆರೆ ಜಿಲ್ಲೆಯ ಮೂರು ಪ್ರೌಢಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ, ಹೊಯ್ಸಳ ಪ್ರೌಢಶಾಲೆ, ಸರ್ವಮಂಗಳಮ್ಮ ಮಾಗನೂರು ಬಸಪ್ಪ ಪ್ರೌಢಶಾಲೆಗಳಲ್ಲಿ ಯಾವುದೇ ವಿದ್ಯಾ‌ರ್ಥಿಗಳಿಗೆ ಉತ್ತೀರ್ಣದ ಫಲಿತಾಂಶ ದೊರೆತಿಲ್ಲ.‌

ಇದನ್ನೂ ಓದಿದ್ದೀರಾ? ಎಟಿಎಂ ಶುಲ್ಕ ಹೆಚ್ಚಳದಿಂದ ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ಅವಧಿ ಇಳಿಕೆವರೆಗೆ: ಆರ್ಥಿಕ ಬದಲಾವಣೆಗಳ ಪರಿಣಾಮಗಳೇನು?

ಜಿಲ್ಲೆಯಲ್ಲಿ ಅತ್ಯುತ್ತಮ ಶ್ರೇಣಿ ಎ+ 1055 ವಿದ್ಯಾರ್ಥಿಗಳು, ಉತ್ತಮ ಶ್ರೇಣಿ ಎ 2398 ವಿದ್ಯಾರ್ಥಿಗಳು, ಪ್ರಥಮ ದರ್ಜೆ ಬಿ+ 2995 ವಿದ್ಯಾರ್ಥಿಗಳು, ಬಿ ಶ್ರೇಣಿ 3320 ವಿದ್ಯಾರ್ಥಿಗಳು, ಸಿ+ ಶ್ರೇಣಿಯಲ್ಲಿ 2880 ವಿದ್ಯಾರ್ಥಿಗಳು, ಸಿ ಶ್ರೇಣಿಯಲ್ಲಿ 548 ವಿದ್ಯಾರ್ಥಿಗಳು ಫಲಿತಾಂಶ ಪಡೆದಿದ್ದಾರೆ.‌

ಒಟ್ಟಾರೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ.74.28 ಫಲಿತಾಂಶ ಗಳಿಸಿ 23ನೇ ಸ್ಥಾನದಲ್ಲಿದ್ದ ದಾವಣಗೆರೆ ಜಿಲ್ಲೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.66.08 ಫಲಿತಾಂಶದೊಂದಿಗೆ 21ನೇ ಸ್ಥಾನಕ್ಕೇರಿದೆ. ಸ್ಥಾನದಲ್ಲಿ ಏರಿಕೆ ಕಂಡರೂ ಫಲಿತಾಂಶ ಶೇ.‌8ರಷ್ಟು ಇಳಿಕೆ ಕಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...