ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣ; ಓರ್ವನ ಬಂಧನದ ಕುರಿತು ಎಸ್‌ಪಿ ಪ್ರತಿಕ್ರಿಯೆ

Date:

ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ. 

ಶಿವಮೊಗ್ಗ ನಗರದ ಕಸ್ತೂರ ಬಾ ರಸ್ತೆಯಲ್ಲಿರುವ ಮುರುಡೇಶ್ವರ ದೇವಸ್ಥಾನದ ಬಳಿ ಹಿರಾಲಾಲ್ ಸನ್ ಎಂಬುವರ ಮೇಲೆ ಇಬ್ವರು ಕಿಡಿಗೇಡಿಗಳು ಹಲ್ಲೆ ನಡೆಸಿ ಚಾಕು ಇರಿದಿದ್ದ ಘಟನೆಗೆ ಸಂಬಂಧಿಸಿದಂತೆ ಎಸ್‌ಪಿ ಮಿಥುನ್ ಕುಮಾರ್ ಜಿ ಕೆ ಸುದ್ದಿಗೋಷ್ಠಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

“ಶಿವಮೊಗ್ಗ ನಗರದ ಕಸ್ತೂರ ಬಾ ರಸ್ತೆಯಲ್ಲಿರುವ ಮುರುಡೇಶ್ವರ ದೇವಸ್ಥಾನದ ಬಳಿ ಬುಧವಾರ ಸಂಜೆ 6ರ ಸುಮಾರಿಗೆ ನಾಲ್ವರು, ಕಚೋರಿ ಮಾರುವ ಅಂಗಡಿಗೆ ಬಂದಿದ್ದರು. ಕಚೋರಿ ಅಂಗಡಿಗೆ ಬಂದವರು ಅವರ ಬಳಿ ಹತ್ತಿರದಲ್ಲಿರುವ ಕುಕ್ಕರ್ ಅಂಗಡಿಯ ವಿಳಾಸ ಕೇಳಿದ್ದರು. ಕುಕ್ಕರ್ ಅಂಗಡಿ ಬಾಗಿಲು ಹಾಕಿದ್ದಕ್ಕೆ ನಮಗೆ ತಪ್ಪು ವಿಳಾಸ ಹೇಳುತ್ತೀಯಾ ಎಂದು ಗಲಾಟೆ ಮಾಡಿದ್ದರು” ಎಂದು ತಿಳಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರ ? ಬೀದರ್‌ ಎಟಿಎಂ ದರೋಡೆ ಪ್ರಕರಣ : ಹೈದರಾಬಾದ್‌ನಲ್ಲಿ ಮತ್ತೆ ಗುಂಡಿನ ದಾಳಿ

“ಘಟನೆಯನ್ನು ಖಂಡಿಸಿ ಜೈನ ಸಮುದಾಯದ ವ್ಯಾಪಾರಸ್ಥರು ಮನವಿ ಮಾಡಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮದನ್ ಯಾನೆ ಮಂಜುನಾಥ್(35) ಎಂಬಾತನನ್ನು ಬಂಧಿಸಲಾಗಿದೆ. ಉಳಿದ ಮೂವರ ಪತ್ತೆಗೆ ಕ್ರಮ ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಇಂತಹ ಘಟನೆ ವೇಳೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು ಎಸ್‌ಪಿ ಮಿಥುನ್‌ ಕುಮಾರ್‌ ವರ್ತಕರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...