ದಾವಣಗೆರೆ ವಿವಿ ಎಡವಟ್ಟು: ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ವಿತರಿಸಿದ ಸಿಬ್ಬಂದಿ!

Date:

ಎಲ್ಲ ವಿಶ್ವವಿದ್ಯಾನಿಲಯ ಮತ್ತು ಪರೀಕ್ಷಾ ಇಲಾಖೆಗಳಂತೆ ದಾವಣಗೆರೆ ವಿಶ್ವವಿದ್ಯಾಲಯ ಕೂಡ ಆಗಾಗ ಪ್ರಮಾದಗಳನ್ನು ಮಾಡಿ ಸುದ್ದಿಯಲ್ಲಿರುತ್ತದೆ. ಈಗ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷೆಯ ವೇಳೆ ದೊಡ್ಡ ಎಡವಟ್ಟು ಮಾಡಿ ಪೇಚಿಗೆ ಸಿಲುಕಿಕೊಂಡಿದೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಡವಟ್ಟು ನಡೆದಿದ್ದು ಇಂದು (ಆ.6) ನಡೆದ ಬಿ.ಕಾಂ ನ ಇ- ಕಾಮರ್ಸ್ ಪರೀಕ್ಷೆಯಲ್ಲಿ. ಇಂದು ವಿ.ವಿ. ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕೊಡುವ ಬದಲು, ತಯಾರಾಗಿದ್ದ ಉತ್ತರ ಪತ್ರಿಕೆ ಸರಬರಾಜು ಮಾಡಿ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವ ಬದಲು ಉತ್ತರ ಇರುವ ಪತ್ರಿಕೆ ನೀಡಿ ಎಡವಟ್ಟು ಮಾಡಿಕೊಂಡಿದ್ದು, ಪ್ರಶ್ನೆಪತ್ರಿಕೆ ಎಂದು ವಿದ್ಯಾರ್ಥಿಗಳ ಕೈಗೆ ಕೊಟ್ಟ ಬಳಿಕವಷ್ಟೇ ವಿಚಾರ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದಾವಣಗೆರೆ 1 3

ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 90 ಕಾಲೇಜುಗಳ ಪೈಕಿ 15 ಕಾಲೇಜುಗಳಿಗೆ ಪರೀಕ್ಷೆಯಲ್ಲಿ ಈ ತೊಂದರೆ ಉಂಟಾಗಿದೆ. ಈ ಘಟನೆ ನಂತರ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ಕುಲಸಚಿವ ಪ್ರೊ.ರಮೇಶ್ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ದಾವಣಗೆರೆ ವಿವಿ ಪರೀಕ್ಷಾಂಗ ಕುಲ ಸಚಿವ ಪ್ರೊ.ರಮೇಶ್ ಅವರನ್ನು ಮಾತನಾಡಿಸಿದಾಗ, “ಇಂದು ಬಿಕಾಂ ಆರನೇ ಸೆಮಿಸ್ಟರ್ ನ ಇ-ಕಾಮರ್ಸ್‌ ಪ್ರಶ್ನೆ ಪತ್ರಿಕೆ ನಮ್ಮ ವ್ಯಾಪ್ತಿಯ 90 ಕಾಲೇಜುಗಳ ಪೈಕಿ 15 ಕಾಲೇಜುಗಳಲ್ಲಿ ನಡೆಯುತ್ತಿದ್ದು, ಈ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಬದಲು ಬೋರ್ಡ್ ಆಫ್ ಎಕ್ಸಾಮ್‌ನ ತಪ್ಪಾದ ಕ್ರಮದಿಂದ ಇವ್ಯಾಲುವೇಶನ್‌ನ ಉತ್ತರ ಪತ್ರಿಕೆ ಮುದ್ರಿಸಿಕೊಟ್ಟಿದೆ. ಇದು ಗಮನಕ್ಕೆ ಬಂದ ತಕ್ಷಣವೇ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಯಾರಿಂದ ತಪ್ಪಾಗಿದೆ ಎಂಬುದನ್ನು ಗುರುತಿಸಲಾಗಿದ್ದು, ಈ ಬಗ್ಗೆ ವಿಶ್ವವಿದ್ಯಾನಿಲಯದ ಕಾನೂನಿನ ಪ್ರಕಾರ ಮುಂದಿನ ತನಿಖೆ ಮತ್ತು ಕ್ರಮಕ್ಕೆ ಆದೇಶಿಸಲಾಗಿದೆ. ಮುಂದೂಡಲಾಗಿರುವ ಪರೀಕ್ಷೆಯನ್ನು ನಡೆಸಲು ಸೆಪ್ಟೆಂಬರ್ ನಲ್ಲಿ ಬೇರೆ ದಿನಾಂಕ ಗೊತ್ತುಪಡಿಸಲು ಸಮಾಲೋಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶೈಕ್ಷಣಿಕ ಸಂಸ್ಥೆಯೊಂದು ಪರೀಕ್ಷೆಗಳಲ್ಲಿ ಈ ರೀತಿ ನಿರ್ಲಕ್ಷ್ಯ ವಹಿಸಿದರೆ ವಿದ್ಯಾರ್ಥಿಗಳ ಭವಿಷ್ಯದ ಗತಿ ಏನು ಎಂದು ಶಿಕ್ಷಣ ತಜ್ಞರು ಮತ್ತು ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...