ಬೀದರ್‌ | ರಾಜ್ಯ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ: ಸಚಿವ ಕೃಷ್ಣಭೈರೇಗೌಡ

Date:

  • ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ ನಾಯಕರಿಲ್ಲ
  • ವಿರೋಧ ಪಕ್ಷ ನಾಯಕ ಇಲ್ಲದಿರುವುದು ಕರ್ನಾಟಕ ವಿಧಾನಸಭೆಗೆ ಅವಮಾನ

ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ ನಾಯಕರನ್ನು ಆಯ್ಕೆ ಮಾಡದ ಬಿಜೆಪಿ ಪಕ್ಷದಿಂದ ಕರ್ನಾಟಕ ವಿಧಾನಸಭೆಗೆ ಹಾಗೂ ರಾಜ್ಯದ ಜನತೆಗೆ ಅವಮಾನ ಆಗ್ತಾ ಇದೆ, ಮೊದಲು ಇದರಿಂದ ಮುಕ್ತಿ ನೀಡಲಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಬೀದರ್‌ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ, ಅದು ಅಲುಗಾಡುತ್ತಿದೆ, ಹೀಗಾಗಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ನೂರು ದಿನ ಕಳೆದರೂ, ಕರ್ನಾಟಕದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲು ಆಗದೇ ಇರುವಷ್ಟು ದುಸ್ಥಿತಿಯಲ್ಲಿ ಬಿಜೆಪಿ ಪಕ್ಷದವರಿದ್ದಾರೆ. ನಾಯಕನಿಲ್ಲದೇ ಇವ್ರು ಹೇಗೆ ಕೆಲಸ ಮಾಡ್ತಾರೆ” ಎಂದು ಪ್ರಶ್ನಿಸಿದರು.

“ಸರ್ಕಾರ ರಚನೆಯಾಗಿ ನೂರು ದಿನ ಕಳೆದರೂ ಸಾಂವಿಧಾನಿಕ ಹುದ್ದೆ ವಿರೋಧ ಪಕ್ಷವನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ನಾವು ಸಚಿವ ಸಂಪುಟ ರಚಿಸಿ ಬಜೆಟ್‌ ಕೂಡ ಮಂಡಿಸಿದ್ದೇವೆ, ಆದರೂ ವಿರೋಧ ಪಕ್ಷದ ಖುರ್ಚಿ ಖಾಲಿ ಬಿದ್ದಿದೆ. ಬಿಜೆಪಿ ಪಕ್ಷದ ಅಂತರೀಕ ಕಚ್ಚಾಟದಿಂದ ಅವರ ಪಕ್ಷದ ಶಾಸಕರೇ ಪಕ್ಷದ ಮೇಲೆ ವಿಶ್ವಾಸ ಕಳೆದುಕೊಂಡು ಬೇರೆ ಕಡೆ ಮುಖ ಮಾಡಿದ್ದಾರೆ. ಈ ಎಲ್ಲಾ ಕಾರಣದಿಂದ ಬಿಜೆಪಿ ಗೊಂದಲದ ಗೂಡಾಗಿದೆ. ರಾಜ್ಯದಲ್ಲಿ ಸುಭದ್ರ ಹಾಗೂ ದೃಢ ಆಡಳಿತ ನೀಡಲು ಮುಂದಾದ ಕಾಂಗ್ರೇಸ್‌ ನೇತ್ರತ್ವದ ಸರ್ಕಾರದ ಕಡೆ ವಿವಿಧ ಪಕ್ಷಗಳ ಶಾಸಕರು ಕಾಂಗ್ರೇಸ್‌ ಸೇರಲು ಬಯಸಿರಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಬೀದರ್‌ | ಪ್ರಕೃತಿ ವಿಕೋಪ ಪರಿಹಾರಕ್ಕೆ 21.34 ಕೋಟಿ ಅನುದಾನ ಲಭ್ಯ: ಸಚಿವ ಕೃಷ್ಣ ಭೈರೇಗೌಡ

“ಉಳಿದ ಪಕ್ಷದಗಳ ಶಾಸಕರು ಕಾಂಗ್ರೇಸ್‌ ಸೇರುವ ಬಗ್ಗೆ ನನಗೆ ಅಧಿಕೃತ ಮಾಹಿತಿ ಇಲ್ಲ, ಬಂದರೆ ಅದರ ಸಾಧಕ-ಭಾದಕವನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ತೀರ್ಮಾನ ಮಾಡುವುದು. ಬರದೇ ಇದ್ರೂ ನಮಗೇನು ಕೊರತೆ ಇಲ್ಲ. ರಾಜ್ಯದ ಜನತೆ ಕಾಂಗ್ರೇಸ್‌ ಗೆ ಅಭೂತಪೂರ್ವ ಬಹುಮತ ನೀಡಿದ್ದಾರೆ. ನಾವು ಸುಭದ್ರ ಸರ್ಕಾರ ನಡೆಸುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...