ಬೀದರ್‌ | ರಾಜ್ಯ ಮಟ್ಟದ ಬುದ್ಧ, ಭೀಮ ಗೀತೆಗಳ ಸ್ಪರ್ಧೆ : ಅಟ್ಟರಗಾ ಭೀಮಶಾಹಿರ ಸಂಘ ಪ್ರಥಮ

Date:

ಕರ್ನಾಟಕ ಪಂಚಶೀಲ ಕಲಾ, ಸಾಹಿತ್ಯ ಪರಿಷತ್ ವತಿಯಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಭೀಮ ಗೀತೆಗಳ ಭಜನೆ ಸಂಗೀತ ಸ್ಪರ್ಧೆಯಲ್ಲಿ ಭಾಲ್ಕಿ ತಾಲ್ಲೂಕಿನ ಅಟ್ಟರಗಾ ಗ್ರಾಮದ ಭೀಮಶಾಹಿರ ಕಾಳಿದಾಸ ಯುವಕ ಸಂಘದ ತಂಡ ಪ್ರಥಮ ಸ್ಥಾನ ಗಳಿಸಿತು.

ರಾಜ್ಯದ ವಿವಿಧ ಜಿಲ್ಲೆಗಳ 27 ಭಜನೆ ತಂಡಗಳು ಪಾಲ್ಗೊಂಡಿದ್ದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ₹21 ಸಾವಿರ ನಗದು ಬಹುಮಾನಕ್ಕೆ ಪಾತ್ರವಾಯಿತು. ವಿಜಯಪುರ ಜಿಲ್ಲೆಯ ಬಾಗೆವಾಡಿಯ ಸೋಮೇಶ್ವರ ಭಜನೆ ತಂಡ ದ್ವಿತೀಯ ಸ್ಥಾನದೊಂದಿಗೆ ₹10 ಸಾವಿರ, ಬಸವಕಲ್ಯಾಣ ತಾಲ್ಲೂಕಿನ ಗುತ್ತಿಯ ಜೈಭೀಮ ಕಲಾ ಪಥ ತಂಡ ತೃತೀಯ ಸ್ಥಾನದೊಂದಿಗೆ ₹5 ಸಾವಿರ ಬಹುಮಾನ ಪಡೆದುಕೊಂಡಿತು.

ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸಿದ ಸಿದ್ಧರಾಮ ಬೆಲ್ದಾಳ ಶರಣರು ಮಾತನಾಡಿ, ʼದೇಶದಲ್ಲಿ ಪ್ರಜೆಗಳು ಶಾಂತಿ, ನೆಮ್ಮದಿ ಬದುಕಿಗೆ ಬುದ್ಧನ ತತ್ವಗಳು ಬೇಕು. ಶರಣರ ತತ್ವ, ಅಂಬೇಡ್ಕರ ಚಿಂತನೆಗಳು ಪ್ರಸಾರ ಮಾಡಬೇಕಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೊ.ಬಸವರಾಜ ಮಯೂರ್ ಮಾತನಾಡಿ, ʼಮನಷ್ಯರೆಲ್ಲರೂ ಒಂದೇ ಎನ್ನುವ ಸಮಾಜ ಜಾತಿ ಸ್ತರ ವಿನ್ಯಾಸದಿಂದ ಮನಸ್ಸಿನಿಂದ ಇಂದು ಸಹ ಪ್ರತಿನಿತ್ಯ ಶೋಷಣೆಗಳು ನಡೆಯುತ್ತಿವೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಭಾರತೀಯರಿಗೆ ಪ್ರಜಾಪ್ರಭುತ್ವದ ದೀಕ್ಷೆ ನೀಡಿ, ಸರ್ವರು ಸಮಾನರು,ಸಮಾನ ರಕ್ಷಣೆ, ಪ್ರಗತಿಯಾಗುವ ಹಕ್ಕು ನೀಡಿದ್ದಾರೆ. ಜನಪ್ರತಿನಿಧಿಗಳು, ಸರ್ಕಾರದ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಳ್ಳುವ ಅನಿವಾರ್ಯತೆಯಾಗಿದೆʼ ಎಂದರು.

ಕಲಾವಿದ ಶಂಭುಲಿಂಗ ವಾಲೊಡ್ಡಿ, ರಾಮಚಂದ್ರ ಕರ್ಮವೀರ, ಬಸವರಾಜ ಉಜ್ವಲೆ ತೀರ್ಪುಗಾರರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಕಾರ್ಯಕ್ರಮದಲ್ಲಿ ಡಾ. ಜ್ಞಾನಸಾಗರ ಭಂತೆ ಶ್ರೀಶರಣ ಪಂಚಶೀಲ ಬೋಧಿಸಿದರು. ಲಕ್ಷ್ಮಣರಾವ್ ಕಾಂಚೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, ಪ್ರಮುಖರಾದ ಜೈಕುಮಾರ ಸಿಂಧೆ, ವೀರಶೆಟ್ಟಿ ಗುಮತಾಪುರ, ಅರ್ಜುನ ಕಾಂಚೆ, ರಮೇಶ ಡಾಕುಳಗಿ, ವಿಶ್ವನಾಥ ದೀನೆ, ರುದ್ರಯ್ಯ ಆ‌ರ್., ಪ್ರಶಾಂತ ದೊಡ್ಡಿ, ಪಂಢರಿ ಪೂಜಾರಿ, ಬಿ.. ಕೃಷ್ಣಪ್ಪ, ರಾಜಕುಮಾರ ಮೂಲಭಾರತಿ, ಚಂದ್ರಕಾಂತ ನಿರಾಟೆ, ವಿಜಯಕುಮಾರ ಸೋನಾರೆ, ಅಂಬಾದಾಸ ಗಾಯಕವಾಡ್ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...