ನಂಜನಗೂಡಿನಲ್ಲಿ ರಾಜ್ಯ ಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿ

Date:

ಮೈಸೂರು ಜಿಲ್ಲೆ, ನಂಜನಗೂಡಿನಲ್ಲಿ‌ ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕುಸ್ತಿ ಸಂಘದ ವತಿಯಿಂದ ರಾಜ್ಯ ಮಟ್ಟದ ಹೊನಲು-ಬೆಳಕು ಕುಸ್ತಿ ಪಂದ್ಯಾವಳಿಯನ್ನು ಫೆಬ್ರವರಿ 6ರಿಂದ 8ರವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕುಸ್ತಿ ಸಂಘದ ಸಂಘಟನಾ ಅಧ್ಯಕ್ಷ ಪೈ. ಪ್ರಸನ್ನಕುಮಾರ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕುಸ್ತಿ ಪಂದ್ಯಾವಳಿಯು 28 ವರ್ಷಗಳ ನಂತರ ನಂಜನಗೂಡಿನಲ್ಲಿ ನಡೆಯುತ್ತಿದ್ದು, ಮೊದಲ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕುಸ್ತಿಯ ಜಾತ್ರೆ ಎಂದು ಹೇಳಬಹುದು. ಈ ಪಂದ್ಯಾವಳಿಯಲ್ಲಿ 15 ಹಾಗೂ 17 ವರ್ಷದೊಳಗಿನ ಕ್ರೀಡಾಪಟುಗಳು, ಹಿರಿಯರ ವರ್ಗದ ಕುಸ್ತಿ ಪಟುಗಳು ಭಾಗವಹಿಸಲಿದ್ದಾರೆ.

ಪುರುಷರು ಹಾಗೂ ಮಹಿಳೆಯರ ಈ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ಯು-15 ವರ್ಷದೊಳಗಿನ ರಾಷ್ಟ್ರೀಯ ಚಾಂಪಿಯನ್‌ ಶಿಪ್ ಕರ್ನಾಟಕ ರಾಜ್ಯ ಕುಸ್ತಿ ತಂಡ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಾದ ಕರ್ನಾಟಕ ಕಿಶೋರ, ಕರ್ನಾಟಕ ಕುಮಾರ, ಕರ್ನಾಟಕ ಕೇಸರಿ, ಕರ್ನಾಟಕ ಕಂಠೀರವ ಪ್ರಶಸ್ತಿಗಳು ಹಾಗೂ ಮಹಿಳಾ ವಿಭಾಗದಲ್ಲಿ ಕರ್ನಾಟಕ ಕಿಶೋರಿ ಹಾಗೂ ಕರ್ನಾಟಕ ಕುಮಾರಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾದ ಕುಸ್ತಿ ಪಟುಗಳಿಗೆ ರಾಜ್ಯ ಎಸ್ಸಿಪಿ ಟಿಸಿಎಸ್ಪಿ ನಿಧಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವೇತನ ಸಿಗಲು ಸಹಾಯವಾಗಲಿದೆ. ಅಲ್ಲದೇ, ಯುವ ಪ್ರತಿಭೆಗಳಿಗೆ ಅವಕಾಶ ನೀಡುವುದರ ಜೊತೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಕಡೆಗಳಿಂದ ನೂರಕ್ಕೂ ಹೆಚ್ಚು ಕುಸ್ತಿ ಪಟುಗಳು ಭಾಗವಹಿಸಲಿದ್ದಾರೆ. ಇಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ನೇರವಾಗಿ ಆಯ್ಕೆಯಾಗಲಿದ್ದಾರೆ. ವಿಜೇತರಾದವರಿಗೆ ಬೆಳ್ಳಿ ಗದೆ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದರು.

ಜ್ಞಾನ ಪ್ರಕಾಶ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಸುನೀಲ್ ಬೋಸ್, ಶಾಸಕರಾದ ದರ್ಶನ್ ದ್ರುವನಾರಾಯಣ ಹಾಗೂ ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ, ಫೆ.8ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಆಹಾರ ಭದ್ರತಾ, ಸುರಕ್ಷತಾ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿ: ಡಾ ಎಚ್ ಕೃಷ್ಣ

ಪತ್ರಿಕಾಗೋಷ್ಠಿಯಲ್ಲಿ ಪಂದ್ಯಾವಳಿ ಆಯೋಜಕ ಮಹದೇವಮೂರ್ತಿ, ರಾಂಬೋ ಕಿರಣ್, ಗಿರೀಶ್ ತೊರೆಮಾವು, ಡಾ. ವಿನೋದ್ ಕುಮಾರ್, ಶ್ರೀಕಂಠ ಪ್ರಸಾದ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...