ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ದಾಖಲೆ ಪರಿಶೀಲನೆ

Date:

ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಲೋಕಾಯುಕ್ತ ಸದ್ದು ಮಾಡುತ್ತಿದೆ. ಹಲವಾರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸರ್ಕಾರ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದವು. ಅಂತಹ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಆದಾಯ ಮೂಲ, ಆಸ್ತಿ ಪತ್ರಗಳು ಹಾಗೂ ಬ್ಯಾಂಕ್‌ ವಿವರಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರು, ತುಮಕೂರು, ಮೈಸೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಹಾಗೂ ಇಂಡಸ್ಟ್ರೀಸ್ ಅಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರಿನಲ್ಲಿ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅವರ ತೋಟದ ಮನೆ ಸೇರಿ ಹಲವು ಕಡೆಗಳಲ್ಲಿ 13 ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.

ಈ ಸುದ್ದಿ ಓದಿದ್ದೀರಾ?: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ, ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೆಟ್ಟರ್, ಬೀದರ್ ಭೂಸೇನಾ ನಿಗಮದ ಅಧಿಕಾರಿಯ ನಿವಾಸಗಳು ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಲವಾರು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...