ಬೀದರ್ | ಅಂಬೇಡ್ಕರ್ ಕುರಿತು ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಸಂಸದ ಸಾಗರ್ ಖಂಡ್ರೆ ಆಗ್ರಹ

Date:

ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಸಭ್ಯ ಮತ್ತು ಕೀಳಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಕ್ಷಣವೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಸಂಸದ ಸಾಗರ್‌ ಖಂಡ್ರೆ ಒತ್ತಾಯಿಸಿದ್ದಾರೆ.

ʼಭಾರತದ ಸಂವಿಧಾನಕ್ಕೆ ಬುನಾದಿ ಹಾಕಿ ದೇಶದ ಪ್ರಜಾಪ್ರಭುತ್ವ ಬಲಪಡಿಸಿದವರು ಅಂಬೇಡ್ಕರ್. ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸೋಮವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ‘ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಈಗ ಫ್ಯಾಷನ್ ಆಗಿಬಿಟ್ಟಿದೆ. ಅದರ ಬದಲು ದೇವರನ್ನು ಜಪಿಸಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು’ ಎಂದು ಹೇಳುವ ಮೂಲಕ ಡಾ. ಅಂಬೇಡ್ಕರ್ ಅವರ ತತ್ವ, ಆದರ್ಶ, ಮತ್ತು ಅವರ ವಿಚಾರಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದರಿಂದ ದೇಶದ ಜನರಿಗೆ ನೋವುಂಟು ಮಾಡಿದೆ. ಬಿಜೆಪಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಪ್ರಾರಂಭದಿಂದಲೇ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಅಂಬೇಡ್ಕರ್ ಅವರ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ

ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಸಹಬಾಳ್ವೆಗೆ ಒತ್ತು ನೀಡುತ್ತದೆ. ಆದರೆ ಬಿಜೆಪಿ ಸರ್ಕಾರದ ಧೋರಣೆಗಳು ಈ ತತ್ವಗಳಿಗೆ ವಿರುದ್ಧವಾಗಿದೆ‌. ಅಂಬೇಡ್ಕರ್ ಅವರ ತತ್ವಗಳು ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸಲು ಪ್ರೇರಣೆಯಾಗಿವೆ. ಅವರನ್ನು ಅವಮಾನಿಸುವ ಮಾತುಗಳು ದೇಶದ ಸಂವಿಧಾನದ ವಿರುದ್ಧ ದಾಳಿಯಂತೆ ಕಂಡುಬರುತ್ತವೆ. ಕಾಂಗ್ರೆಸ್ ಪಕ್ಷ ಸಂವಿಧಾನ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ರಕ್ಷಿಸಲು ಸದಾ ಬದ್ಧರಾಗಿದ್ದೇವೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...