ರಾಜ್ಯಾದ್ಯಂತ ಏಕಕಾಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ʼಶಕ್ತಿ ಯೋಜನೆʼಗೆ ಚಾಲನೆ

Date:

  • ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಚಾಲನೆ
  • ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಲೋಗೋ ಅನಾವರಣ

ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಏಕಕಾಲಕ್ಕೆ ರಾಜ್ಯಾದ್ಯಂತ ಚಾಲನೆ ನೀಡಲಾಯಿತು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದ ಗ್ರ್ಯಾಂಡ್‌ ಸ್ಟೆಪ್ಸ್‌ ಮೇಲೆ ಹಾಕಲಾಗಿದ್ದ ಬೃಹತ್‌ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರಾಜ್ಯದ ಎಲ್ಲ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತವಾಗಿ ಚಾಲನೆ ನೀಡಿದರು.

ಇದೇ ವೇಳೆ ಆಯಾ ಜಿಲ್ಲಾ ಉಸ್ತುವಾರಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಉಡುಪಿಯಲ್ಲಿ ಲಕ್ಷ್ಮಿ ಹೆಬ್ಬಾಳರ್‌, ಮೈಸೂರಿನಲ್ಲಿ ಎಚ್‌ ಸಿ ಮಹದೇವಪ್ಪ, ಬೆಳಗಾವಿಯಲ್ಲಿ ಸತೀಶ್‌ ಜಾರಕಿಹೊಳಿ, ಬಾಗಲಕೋಟೆಯಲ್ಲಿ ಆರ್‌ ಬಿ ತಿಮ್ಮಾಪೂರ, ತುಮಕೂರಿನಲ್ಲಿ ಡಾ. ಜಿ ಪರಮೇಶ್ವರ್, ಹಾಸನದಲ್ಲಿ ಕೆ ಎನ್‌ ರಾಜಣ್ಣ ಸೇರಿದಂತೆ ಹಲವು ಸಚಿವರು ತಮ್ಮ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ | ನುಡಿದಂತೆ ನಡೆದಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

“ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನ ವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ಬದೋಲೆ, ಕೆಕೆಆರ್ ಡಿಬಿ ಕಾರ್ಯದರ್ಶಿ ಅನಿವೃದ್ಧಿ ಶ್ರವಣ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...