ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ: ಬಿಎಸ್‌ವೈ

Date:

  • ‘ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ
  • ಲೋಕಸಭೆ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸಿಕೊಂಡು ಬರುವೆ’

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ನಾಳೆ (ಸೆ.10) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಅವರು, “ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸಿಕೊಂಡು ಬರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ. ನಾಳೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೌರ್ಜನ್ಯ ನಡೆದು 120 ದಿನ ಕಳೆದರೂ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ: ಖಾರವಾಗಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

“ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ. ಪ್ರತಿಪಕ್ಷ ನಾಯಕರು ಇಲ್ಲ ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ. ವಲಸಿಗ ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ” ಎಂದರು.

“ರೈತರ ಆತ್ಮಹತ್ಯೆ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಶಿವಾನಂದ ಪಾಟೀಲ್​ರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ” ಎಂದರು.

“ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂಬ ಎಂಪಿ ರೇಣುಕಾಚಾರ್ಯ ಹೇಳಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...