ಶೇಷಾದ್ರಿಪುರಂ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೈಸೂರಿನ ಎನ್ಎಸ್ಎಸ್ ಘಟಕ ಹಾಗೂ ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಎನ್ಎಸ್ಎಸ್ ಅಧಿಕಾರಿ ಡಾ. ರಾಘವೇಂದ್ರ ಮಾತನಾಡಿ, “ಶೈಕ್ಷಣಿಕ ಹಿತದೃಷ್ಟಿಯಿಂದ ಪುಸ್ತಕ, ಲೇಖನಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಹಾಗೆಯೇ ಶಿಕ್ಷಣದಿಂದಲೇ ಭವಿಷ್ಯ ರೂಪಿಸಿಕೊಳ್ಳಬೇಕು. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಂಜುರಾಮ್ ಪುಟ್ಟೇಗೌಡ, ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಪುರುಷೋತ್ತಮ್ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಯಶೋಧ ಕೆ ಎಸ್, ಸಹ ಶಿಕ್ಷಕರಾದ ಶ್ರೀನಿವಾಸಚಾರಿ ಎನ್ ಎಸ್, ಗ್ರಾಮದ ಮುಖಂಡ ದೀಪಕ್ ಹಾಗೂ ವಿದ್ಯಾರ್ಥಿಗಳು ಇದ್ದರು.





