ಮಡಿಕೇರಿ | ವಿದ್ಯಾರ್ಥಿಗಳಿಗೆ ಸಾಹಿತ್ಯಾಸಕ್ತಿ ಮೂಡಿಸಲು ಕಥಾ ಸ್ಪರ್ಧೆಗಳು ದಾರಿದೀಪವಾಗಲಿವೆ: ಕಟ್ಟೆಮನೆ ಅನುಸೂಯ

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಗಿನ ಗೌರಮ್ಮರವರ ನೆನಪಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ‘ಸಣ್ಣ ಕಥೆಗಳ ಗೌರಮ್ಮ ಕಥಾಸ್ಪರ್ಧೆ’ಯನ್ನು ಬ್ಲಾಸಂ ಶಾಲೆಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಮುಖ್ಯೋಪಧ್ಯಾಯಿನಿ ಕಟ್ಟೆಮನೆ ಅನುಸೂಯ, ‘ವಿದ್ಯಾರ್ಥಿಗಳಿಗೆ ಸಾಹಿತ್ಯಾಸಕ್ತಿ ಮೂಡಿಸಲು ಕಥಾ ಸ್ಪರ್ಧೆಗಳು ದಾರಿದೀಪವಾಗಲಿವೆ’ ಎಂದು ಹೇಳಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಕೊಡಗಿನ ಗೌರಮ್ಮ ತಮ್ಮ ಸಾಹಿತ್ಯ ಮತ್ತು ಕತೆ ಕವನ ರಚನೆಗಳನ್ನು ರೂಡಿಸಿಕೊಂಡಿದ್ದರು. ಕೊಡಗಿಗೆ ಗಾಂಧೀಜಿ ಭೇಟಿ ಕೊಟ್ಟ ಸಂದರ್ಭದಲ್ಲಿ ತಮ್ಮ ಮೈಮೇಲಿನ ಚಿನ್ನವನ್ನು ಸ್ವಾತಂತ್ರ್ಯ ಹೋರಾಟಕ್ಕೆ ದಾನ ನೀಡುವ ಮೂಲಕ ಸ್ವಾತಂತ್ರ ಹೋರಾಟಗಾರರಿಗೆ ಪ್ರೇರಣದಾಯಕರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಮುಖ್ಯ ಅತಿಥಿ ಕೊಡಗು ಜಿಲ್ಲಾ ಕಸಾಪರಿ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಮಾತನಾಡುತ್ತಾ, ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು. ಕನ್ನಡ ನಾಡ, ನುಡಿ, ಆಚಾರ, ವಿಚಾರ, ಸಂಸ್ಕೃತಿ, ನೆಲ-ಜಲ ಇವುಗಳನ್ನು ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಬೇಕು. ಮುಂದಿನ ಸಾಹಿತ್ಯ ಬೆಳವಣಿಗೆಯ ಚುಕ್ಕಾಣಿ ಹಿಡಿಯಲು ವಿದ್ಯಾರ್ಥಿಗಳು ಸಜ್ಜಾಗಬೇಕು ಈಗಿನಿಂದಲೇ, ಕತೆ ಕವನಗಳನ್ನು ತಮ್ಮ ಸ್ವಂತ ಆಲೋಚನಾ ಶಕ್ತಿಯಿಂದ ಬರೆಯಲು ಪ್ರಾರಂಭಿಸಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...