ಸಹಕಾರ ಸಂಸ್ಥೆಗಳು ಹಾಗೂ ಬ್ಯಾಂಕ್‌ಗಳಲ್ಲಿ ಹಣ ದುರುಪಯೋಗ ಕಂಡುಬಂದರೆ ಕಠಿಣ ಕ್ರಮ: ಸಚಿವ ಕೆ.ಎನ್ ರಾಜಣ್ಣ

Date:

ಸಹಕಾರ ಸಂಸ್ಥೆಗಳು ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಹಣ ದುರುಪಯೋಗ ಕಂಡುಬಂದರೆ, ಅಂಥಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸಹಾಕಾರ ಇಲಾಖೆಯ ಮೈಸೂರು ಭಾಗದ ಎಂಟು ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಬ್ಯಾಂಕ್ ಸಿಬ್ಬಂದಿಗಳು ಪರಿಶೀಲನೆ ಮಾಡಿ ಸಾಲ ವಿತರಣೆ ಮಾಡಬೇಕು. ಎಲ್ಲ ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಇರಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪಾಸ್‌ವರ್ಡ್‌ಗಳು ದುರುಪಯೋಗ ಆಗಬಾರದು. ಯಾವುದೇ ಅಧಿಕಾರಿಗಳ ಮೇಲೆ ಹಣ ದುರುಪಯೋಗದ ದೂರುಗಳು ಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಹಿಂದಿನ ಹಣ ದುರುಪಯೋಗದ ಪ್ರಕರಣಗಳು ಇದ್ದರೆ ಪ್ರಕರಣಗಳನ್ನು ಬೇಗ ಇತ್ಯರ್ಥ ಪಡಿಸಿ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರ ಇಲಾಖೆಯಲ್ಲಿ ಹಣ ದುರುಪಯೋಗದ ಕುರಿತು ದಾಖಲಾಗಿರುವ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, “ತುಂಬಾ ಪ್ರಕರಣಗಳು ಇನ್ನೂ ಇತ್ಯರ್ಥ ಆಗದೆ ಹಾಗೆ ಉಳಿದಿವೆ. ಕೆಲವು ಅಧಿಕಾರಿಗಳು ಕೋರ್ಟ್ ಪ್ರಕರಣಗಳಿಗೆ ಸರಿಯಾಗಿ ಹಾಜರಾಗುವುದಿಲ್ಲ. ಈ ರೀತಿ ಆಗಬಾರದು. ಸಂಬಂಧಿಸಿದ ಅಧಿಕಾರಿಗಳು ಕೋರ್ಟ್ ಪ್ರಕರಣಗಳಿಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇದರಿಂದ ಸಹಕಾರ ಸಂಸ್ಥೆಗಳಲ್ಲಿ ಅಕ್ರಮವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಹಕಾರ ಸಂಸ್ಥೆಗಳಿಂದ ವಿತರಿಸುವ ಸಾಲ ವಸೂಲಾತಿ ಮಾಡುವಲ್ಲಿ ಅಧಿಕಾರಿಗಳು ಕಾನೂನು ರೀತಿ ಕ್ರಮ ವಹಿಸಬೇಕು. ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಮಾತ್ರ ಇರದೆ, ಫೀಲ್ಡ್‌ನಲ್ಲಿಯೂ ಹೋಗಿ ಕಾರ್ಯ ನಿರ್ವಹಿಸಬೇಕು. ಸಹಕಾರ ಸಂಸ್ಥೆಗಳಿಂದ ಹೆಚ್ಚಾಗಿ ರೈತರು, ಮಹಿಳೆಯರು ಸಾಲ ಸೌಲಭ್ಯ ಪಡೆಯುತ್ತಾರೆ. ಸಹಕಾರ ಸಂಸ್ಥೆಗಳಲ್ಲಿ ಕಾಲ ಕಾಲಕ್ಕೆ ಆಡಿಟ್‌ಗಳು ನಡೆಯುತ್ತಿರಬೇಕು” ಎಂದು ಸೂಚಿಸಿದರು.

“ಸಹಕಾರ ಸಂಸ್ಥೆಗಳ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್ ತೆರೆಯಬೇಕು. ಡಿಸೆಂಬರ್ ಒಳಗೆ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ತೆರೆಯಬೇಕು. ಜನೌಷಧಿ ಕೇಂದ್ರಗಳನ್ನು ಸಹಕಾರಿ ಸಂಘಗಳ ಸಹಯೋಗದೊಂದಿಗೆ ತೆರೆಯಲು ಪ್ರಾಯೋಗಿಕ ಪರೀಕ್ಷೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ ಪ್ರಮುಖ ಉದ್ಯೋಗವಾಗಿದೆ. ಹಾಲು ಉತ್ಪಾದನೆ ವೆಚ್ಚವನ್ನು ಕಡಿಮೆ ಮಾಡುವ ಕ್ರಮಗಳನ್ನು ಕೈಗೊಳ್ಳಬೇಕು. ಆಗ ಮಾತ್ರ ಹಾಲು ಉತ್ಪಾದಕರಿಗೆ ಹೆಚ್ಚಿನ ಲಾಭ ದೊರೆಯಲು ಸಾಧ್ಯ” ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸಹಕಾರ ಸಂಘಗಳ ರಿಜಿಸ್ಟಾರ್ ಕ್ಯಾಪ್ಟನ್ ರಾಜೇಂದ್ರ, ಮೈಸೂರು ಪ್ರಾಂತ್ಯದ ವಿವಿಧ ಸಹಕಾರ ಸಂಸ್ಥೆಗಳು ಹಾಗೂ ಬ್ಯಾಂಕ್ ಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...