ರಾಯಚೂರು | ಬಾಲ ಕಾರ್ಮಿಕರನ್ನು ರಕ್ಷಿಸಲು ಕಠಿಣ ಕ್ರಮ; ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್‌

Date:

ಬಾಲ ಕಾರ್ಮಿಕತೆಯಿಂದ ಬಿಡುಗಡೆಗೊಂಡ ಮಕ್ಕಳನ್ನು ಮುಂದಿನ ವ್ಯಾಸಂಗಕ್ಕಾಗಿ ವಸತಿ ನಿಲಯಗಳಲ್ಲಿ ದಾಖಲಿಸಿ ಶಿಕ್ಷಣ ಮತ್ತು ಸರ್ಕಾರದ ಸೌಲಭ್ಯಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ವಾರ್ಷಿಕ ಸಾಮಾನ್ಯ ಸಭೆ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಕಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು ಜಮೀನು, ಹೋಟೆಲ್, ಗ್ಯಾರೇಜ್ ಸೇರಿದಂತೆ ಇನ್ನಿತರ ಕೆಲಸಗಳಲ್ಲಿ ತೊಡಗುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಬೇಕಾಗಿದೆ. ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಮಕ್ಕಳು ಜಮೀನು ಕೆಲಸಕ್ಕೆ ತೆರಳುತ್ತಿದ್ದಾರೆ. ದಾಳಿ ಮಾಡಬೇಕು, ಜಮೀನು ಮಾಲೀಕರು ಹಾಗೂ ಕರೆದುಕೊಂಡ ಹೋಗುವ ವಾಹನದ ಮೇಲೆ ಪ್ರಕರಣ ದಾಖಲಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ತಿಂಗಳು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಐದರಿಂದ ಆರು ಪ್ರಕರಣ ದಾಖಲಿಸಬೇಕು. ದಾಳಿ ವೇಳೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಇರಬೇಕು. ಇಲ್ಲಿಯವರೆಗೆ ದಾಳಿ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಈ ತಿಂಗಳಿಂದ ಪ್ರತಿ ವಾರಕ್ಕೆ ಒಂದರಿಂದ ಎರಡು ದಾಳಿ ಮಾಡಬೇಕು. ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದರೆ ಇಂತಹ ಬಾಲ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ತಾಲೂಕು ಮಟ್ಟದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ನಿರ್ಮೂಲನೆ ಸಮಿತಿ ಸಭೆ ನಡೆಸಬೇಕು. ಕಾನೂನು ಅರಿವು, ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಬೇಕು. ಸ್ಲಂ ಬಡಾವಣೆ, ಎಸ್‌ಸಿ, ಎಸ್ಟಿ ಜನಾಂಗ ಇರುವ ಪ್ರದೇಶದಲ್ಲಿ ಜಾಥಾ, ಸೇರಿದಂತೆ ಇತರೆ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದರು.

ಇದೇ ವೇಳೆ ಜಿಲ್ಲಾ ಮಟ್ಟದ ಬಾಲ ಕಾರ್ಮಿಕ ಯೋಜನೆಯ ಸಭೆಗೆ ಗೈರು ಹಾಜರಾದ 13 ಇಲಾಖೆಗಳ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಗೆ ಗೈರಾಗಿದ್ದ ಪೋಲಿಸ್ ಇಲಾಖೆ, ಸಹಾಯಕ ಆಯುಕ್ತರು  ಲಿಂಗಸುಗೂರು, ರಾಯಚೂರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಖಾನೆಗಳ ಸಹಾಯಕ ನಿರ್ದೇಶಕ, ಲೋಕೋಪಯೋಗಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ರೇಷ್ಮೆ ಇಲಾಖೆ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಸೇರಿ 13 ಇಲಾಖೆಗಳ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೆಲೂರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಕಾರ್ಮಿಕ ಇಲಾಖೆ ಅಧಿಕಾರಿ ಆರತಿ, ಜಿಲ್ಲಾ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಮಕ್ಕಳ ಸಹಾಯವಾಣ  ಕೋ ಅರ್ಡಿನೇಟರ್ ಸುದರ್ಶನ, ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...