ಕಲಬುರಗಿ | ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳು ಒತ್ತಾಯ

Date:

ಶಹಾಬಾದ್ ತಾಲ್ಲೂಕಿನ ಹೊನಗುಂಟ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ಶಹಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು.

ಶಹಾಬಾದ್‌ ಪಟ್ಟಣದ ನೆಹರು ವೃತ್ತದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಶಹಾಬಾದ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿಗಳು ಬಂದು ಹಕ್ಕೊತ್ತಾಯ ಪತ್ರ ಸ್ವೀಕರಿಸಿದರು, ಮೇಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ. ಮಾತನಾಡಿ, “ಶಹಾಬಾದ್ ತಾಲೂಕಿನಲ್ಲಿ ಬರುವ ಹೊನಗುಂಟ ಗ್ರಾಮದಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಶಹಾಬಾದ್, ಕಲಬುರಗಿ ಜೇವರ್ಗಿ ಹಾಗೂ ಚಿತ್ತಾಪುರದ ಶಾಲಾ-ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಸೂಕ್ತ ಸಮಯಕ್ಕೆ ಬಸ್ ಬಾರದ ಹಿನ್ನಲೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮಕ್ಕೆ ತಂದರೂ ಯಾವುದೇ ಪ್ರಯೋಜನೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್‌ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ, ಸರಿಯಾದ ಸಮಯಕ್ಕೆ ಬಸ್ ಗಳ ಅವಶ್ಯಕತೆ ಇದೆ. ಆದರೆ ನಿಗದಿತ ಸಮಯಕ್ಕೆ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೂಲಕ ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ. ವಿದ್ಯಾರ್ಥಿಗಳ ಬಳಿ ಉಚಿತ ಬಸ್ ಪಾಸ್ ಇದ್ದರೂ ಉಪಯೋಗವಾಗುತ್ತಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತುಕೊಂಡು ಶಾಲಾ-ಕಾಲೇಜಿನ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿಗಳಲ್ಲಿ ಉನ್ನತ ಹಂತದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶತಾಯುಷಿ ಅಜ್ಜಿಗೆ ಭಾರವಾಯ್ತಾ ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿ

ಈ ಹೋರಾಟದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ದೇವರಾಜ ಎಸ್ ರಂಗನಾಥ ಮಾನೆ ವಿದ್ಯಾರ್ಥಿಗಳಾದ ಭಾಗ್ಯಶ್, ರೇಖಾ, ಸ್ನೇಹ,ಇಶ್ರತ್ ಬೇಗಂ, ಮಲ್ಲಮ್ಮ,ಜ್ಯೋತಿ,ಭಾಗೇಶ್, ಮನು,ಸಂತೋಷ,ಭರತ್, ಮಲ್ಲು,ಪ್ರಜ್ವಲ್, ಸಿದ್ದು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...