ಕಲಬುರಗಿ | ಬಹುತ್ವದ ಭಾರತ ಉಳಿವಿಗಾಗಿ ವಿದ್ಯಾರ್ಥಿಗಳು ಕೈಜೋಡಿಸಿ

Date:

ದೇಶದಲ್ಲಿ ವಿದ್ಯಾರ್ಥಿನಿಯರು, ಮಕ್ಕಳು ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ, ಅತ್ಯಾಚಾರ, ದಬ್ಬಾಳಿಕೆಗಳು ನಡೆಯುತ್ತಿವೆ. ಹೆಣ್ಣು ತಾನು ಧರಿಸುವ ಉಡುಪು, ಸೇವಿಸುವ ಆಹಾರ ಹಾಗೂ ವೈಯಕ್ತಿಕ ಸಂಬಂಧಗಳ ಆಯ್ಕೆಯ ಮೇಲೆ ಆಳುವ ಸರ್ಕಾರ ನಿರ್ಬಂಧ ಹೇರುವುದು ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಳ್ಳುವ ತಂತ್ರವಾಗಿದೆ ಎಂದು ಅಖಿಲ ಭಾರತ ಎಸ್‌ಎಫ್‌ಐ ಸಹ ಕಾರ್ಯದರ್ಸಿ ದಿಪ್ಸೀತಾ ಧರ್ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ನಗರದ ಪಂಡಿತ ರಂಗಮಂದಿರದಲ್ಲಿಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಆಯೋಜಿಸಿದ ವಿದ್ಯಾರ್ಥಿನಿಯರ ಎರಡು ದಿನದ ರಾಜ್ಯ ಮಟ್ಟದ  ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದರು.

ಎಸ್‌ಎಫ್‌ಐ ಕೇಂದ್ರ ಸಮಿತಿ ಉಪಾಧ್ಯಕ್ಷ ನೀತಿಶ್ ನಾರಾಯಣ್ ಮಾತಾನಾಡಿ, “ದೇಶದಲ್ಲಿ ಹಲವಾರು ಭಾಷೆ, ಜನಾಂಗ, ಧರ್ಮಗಳಿವೆ. ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಪಾದಿಸುವ ನೆಲ. ಇಂತಹ ಬಹುತ್ವ ಸಾರುವ ದೇಶದಲ್ಲಿ ಜನಿಸಿದ ನಾವು ದುಡಿಯುವ ವರ್ಗಕ್ಕೆ ಸೇರಿದ್ದೇವೆ.‌ ಯಾವುದೇ ಒಂದು ಭಾಷೆ, ಧರ್ಮ, ಸಂಸ್ಕೃತಿ ಒಂದು ಆಡಳಿತಕ್ಕೆ ಸೇರಿದಲ್ಲ. ಎಸ್‌ಎಫ್‌ಐ ಈ ನೆಲದ ವೈವಿಧ್ಯತೆಯನ್ನು ಎತ್ತಿ ಹಿಡಿಯುತ್ತದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ದಬ್ಬಾಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ. ದೇಶದ ಮಹಿಳೆಯರ ಸುರಕ್ಷತೆಗೆ ಎಸ್‌ಎಫ್‌ಐ ಸದಾ ಮುಂದಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಹೋರಾಟಗಾರ ಶಿವಶರಣಪ್ಪ ಮೂಳೆಗಾಂವ್ ಸಮಾವೇಶ ಉದ್ಘಾಟಿಸಿ ಮಾತನಾಡಿ, ಎಸ್‌ಎಫ್‌ಐ ಎಂದರೆ ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ ಕಟ್ಟುವ ಸಂಘಟನೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಗಟ್ಟಿಯಾಗಿ ದನಿಯೆತ್ತಿ ಪ್ರತಿರೋಧದ ಮೂಲಕ ಪರಿಹಾರ ಕಂಡುಕೊಳ್ಳುವುದು ಈ ಸಂಘಟನೆ ಕಲಿಸುತ್ತದೆ” ಎಂದು ನುಡಿದರು.

ಸಮಾವೇಶಕ್ಕೂ ಮುನ್ನ ನಗರದ ತಿಮ್ಮಾಪುರ್‌ ವೃತ್ತದಿಂದ ಜಗತ್ ವೃತ್ತದವರೆಗೆ ಮೆರವಣಿಗೆ ಬೃಹತ್‌ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ʼಶಿಕ್ಷಣದ ಹಕ್ಕಿಗಾಗಿ, ಘನತೆಯ ಭವಿಷ್ಯಕ್ಕಾಗಿʼ ಎಂಬ ಘೋಷಣೆಗಳನ್ನು ಕೂಗಿ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜ್ಯ ಮಹಿಳಾ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ; ಅಹವಾಲು ಆಲಿಸಿದ ಅಧಿಕಾರಿಗಳು

ಸಮಾವೇಶದಲ್ಲಿ ಹೋರಾಟಗಾರ್ತಿ ಡಾ.ಮೀನಾಕ್ಷಿ ಬಾಳಿ ಸೇರಿದಂತೆ ಪ್ರಮುಖರಾದ ಭೀಮನಗೌಡ ಸುಂಕೇಶ್ವರಹಾಳ, ಅಮರೇಶ ಕಡಗದ, ಡಾ. ಶರಣಪ್ಪ ಸೈದಾಪೂರ, ಡಾ. ಸಂತೋಷ ಹುಂಪ್ಳಿ, ಬೃಂದಾ ಧನ್ನಿ, ಮಾಲಾಶ್ರೀ ಮತ್ತಿಮೂಡ ಇದ್ದರು. ಮೇಘಾ ಸ್ವಾಗತಿಸಿದರು, ಸುಜಾತ ನಿರೂಪಿಸಿದರು, ಸುಕನ್ಯಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...