ತುಮಕೂರು | ಈ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

Date:

2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ, ತಹಶೀಲ್ದಾರ್ ಡಿ.ಎನ್. ವರದರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಿದ್ಯಾರ್ಥಿ ಮುಖಂಡ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ 2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಎಸ್‌ಎಸ್‌ಪಿ ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ತೋರಿಸುತ್ತಿದ್ದರೂ ವಿದ್ಯಾರ್ಥಿಗಳ ಖಾತೆಗೆ ಹಣ ಬಂದಿಲ್ಲ. ಹಾಗಾಗಿ, ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಪಾವಗಡದಲ್ಲಿ ಹಲವು ಇಲಾಖೆಗಳ ಅಧಿಕಾರಿಗಳ ಕಚೇರಿಗಳಿಗೆ ತೆರಳಿದಾಗ, ವಿದ್ಯಾರ್ಥಿಗಳ ಜೊತೆ ಸಂಯಮದಿಂದ ವರ್ತಿಸುವುದಿಲ್ಲ. ಈ ಬಗ್ಗೆ ಗಮನ ಹರಿಸಬೇಕು ತಿಳಿಸಿದರು.

ಸುಬ್ರಹ್ಮಣ್ಯ ಸಿ.ಎಚ್, ನಂದೀಶ್ ನಾಯ್ಕ್, ವಿರೂಪಾಕ್ಷ, ರವಿ ನಾಯ್ಕ್, ಸುರೇಶ್, ಸಾಗರ್, ನಂದಿನಿ, ಲಾವಣ್ಯ, ಸ್ವಪ್ನಾ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...